ಅಭಾವಿಪ ಪ್ರತಿಭಟನೆ

ಹುಬ್ಬಳ್ಳಿ, ಆ 24: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ಯನ್ನು ರದ್ದು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನೂರಾರು ವಿದ್ಯಾರ್ಥಿಗಳಿಂದ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಅಭಾವಿಪ ಪದಾಧಿಕಾರಿಗಳು ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲಕರವಾಗಿದೆ. ಸದ್ಯ ಬ್ರಿಟಿಷರ ಶಿಕ್ಷಣ ನೀತಿ ಮುಂದುವರೆದಿದ್ದು, ಎನ್‍ಇಪಿ ಯಿಂದ ಇನ್ನೂ ಹೆಚ್ಚಿನ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ಕೂಡಲೆ ಎನ್‍ಇಪಿ ರದ್ದು ಮಾಡುವುದನ್ನು ಕೈ ಬಿಡಬೇಕೆಂದು ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಅಭಾವಿಪ ರಾಜ್ಯಕಾರ್ಯದರ್ಶಿ ಮಣಿಕಂಠ ಕಳಸಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.