
ರಾಯಚೂರು,ಆ.೨:ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿರುವ ಸೈಯದ್‌ಫಜಲ್, ಮೆಹಮೂದ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರಾಗಿ ನಿಯುಕ್ತಿಗೊಳಿಸಿರುವುದನ್ನು ರದ್ದುಗೊಳಿಸಿ ಪ್ರಾಮಾಣಿಕ ಅಧಿಕಾರಿಯನ್ನು ನಿಯೋಜನೆಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಪಂಚಾಯತ್ ರಾಜ್ ಅಪರ ಕಾರ್ಯದರ್ಶಿಗಳಿಗೆ ಮನವಿ ಮಾಡಿ ಅಧಿಕಾರಿ ಸೈಯದ್ ಫಜಲ್ ಸಾರ್ವಜನಿಕ ಸೇವೆ ಹಾಗೂ ಕಾಮಗಾರಿಯಲ್ಲಿ ವಂಚನೆ ನಡೆಸಿದ್ದಾರೆ.
ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದು ಸೇವೆಯಿಂದ ಅಮಾನತುಗೊಂಡಿದ್ದಾರೆ. ಇನ್ನು ೩ ತಿಂಗಳು ಈ ಘಟನೆಗೆ ಸಂಬಂಧಿಸಿದಂತೆ ಇಲಾಖೆ ವಿಚಾರಣೆ ಬಾಕಿ ಇರುವಾಗಲೇ ಅವರನ್ನು ರಾಯಚೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹುದ್ದೆಗೆ ವರ್ಗಾವಣೆ ಮಾಡಿರುವುದನ್ನು ತಕ್ಷಣ ಹಿಂಪಡೆಯಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸೂಕ್ತ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ದ.ಸಂ.ಸ ಜಿಲ್ಲಾ ಸಮಿತಿ ಅಧ್ಯಕ್ಷ ಈಶ್ವರ ಎಕ್ಲಾಸ್‌ಪುರ ಒತ್ತಾಯಿಸಿದ್ದಾರೆ.
ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅವರ ಪೂರ್ವಾಪರ ವಿಷಯಗಳನ್ನು ಪರಿಶೀಲಿಸಿ ಸೂಕ್ತ ಸ್ಥಳಕ್ಕೆ ಸೂಕ್ತ ಅಧಿಕಾರಿಂiiನ್ನು ನಿಯೋಜನೆಗೊಳಿಸಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲ್ಲಿ ಇತರೆ ಪದಾಧಿಕಾರಿಗಳಾದ ಚಿನ್ನರಾಂಪುರ್, ವೆಂಕಟೇಶ್ ಇಟೇಕರ್ ರಾಂಪೂರ್, ಸಣ್ಣೀರಪ್ಪ, ಎ.ರಮೇಶ್ ವಡವಟ್ಟ, ಗುರುರಾಜ ಇತರರು ಇದ್ದರು.