ಅಭಿವೃದ್ಧಿಗಾಗಿ ನನಗೆ ಒಂದು ಅವಕಾಶ ನೀಡಿ- ಶಾಲಂ

ರಾಯಚೂರು,ಮೇ.೦೫- ಹತ್ತು ವರ್ಷಗಳಿಂದ ಶಾಸಕರಾಗಿರುವ ಡಾ. ಶಿವರಾಜ್ ಪಾಟೀಲ್ ಅವರು ರಾಯಚೂರು ನಗರದ ಅಭಿವೃದ್ಧಿಗಾಗಿ ಶ್ರಮಿಸಿಲ್ಲ ಬರೀ ಸುಳ್ಳುಗಳನ್ನ ಹೇಳುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿಯಾದ ಮೊಹಮ್ಮದ್ ಶಾಲಂ ಅವರು ಆರೋಪಿಸಿದರು.
ನಗರದ ಟಿಪ್ಪು ಸುಲ್ತಾನ್ ರಸ್ತೆಯಲ್ಲಿ ಮತಯಾಚನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಹಿರಿಯರ ಆಶೀರ್ವಾದ ಮತ್ತು ಸಹಕಾರದೊಂದಿಗೆ ಟಿಕೆಟ್ ನೀಡಿದ್ದಾರೆ ನಿಮ್ಮೆಲ್ಲರ ಆಶೀರ್ವಾದವಿದ್ದರೆ ಗೆದ್ದೇ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಂತರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಸಿರುದ್ದೀನ್ ಮಾತನಾಡಿ, ರಾಜ್ಯದಲ್ಲಿ ಜಾತ್ಯತೀತ ಪಕ್ಷವಾದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ಕಾಂಗ್ರೆಸ್ ಅಭ್ಯರ್ಥಿಯಾದ ಮೊಹಮ್ಮದ್ ಶಾಲಂ ಅವರಿಗೆ ಬೆಂಬಲಿಸಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರ ಬೆಲೆ ಏರಿಕೆಯಿಂದ ಜನರು ಬೀಸುತ್ತಿದ್ದಾರೆ ಅಲ್ಲದೆ ನಮ್ಮಲ್ಲಿರತಕ್ಕಂತಹ ಸೌಹಾರ್ದತೆಯನ್ನು ಕದಡುವ ಸಂಚು ನಡೆಯುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿಹ ಜಾವಿದುಲ್ ಹಕ್, ರಾಮುಗಿಲೇರಿ, ರಜಾಕ್ ಉಸ್ತಾದ್ ಸೇರಿದಂತೆ ಅನೇಕರು ಇದ್ದರು.