ಅಭಿವೃದ್ಧಿಗಾಗಿ ಪಂಚರತ್ನ ಯೋಜನೆ

ಕೋಲಾರ,ಏ,೨೪:ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜನಪರ ಆಡಳಿತವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ.ಎಂ.ಅನಂತಕೀರ್ತಿ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಿಎಂಆರ್ ಶ್ರೀನಾಥ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲಿನ ಪ್ರೀತಿ, ವಿಶ್ವಾಸ, ಗೌರವ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪಂಚರತ್ನ ಯೋಜನೆಗಳ ಜಾರಿಗಾಗಿ ಪ್ರತಿನಿತ್ಯ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾ ಇದ್ದಾರೆ ಜಿಲ್ಲೆಯನ್ನು ಮೊದಲಿನಿಂದಲೂ ಸ್ವಾಭಿಮಾನದ ಸಂಕೇತ ಎಂದು ಗುರುತಿಸುತ್ತಾರೆ ಇಂತಹ ಜಿಲ್ಲೆಗೆ ಹೊರಗಿನ ವ್ಯಕ್ತಿಗಳು ರಾಜಕೀಯವಾಗಿ ಬಂಡವಾಳ ಹೂಡಿಕೆಗೆ ಬಂದಿದ್ದು ರಾಜಕಾರಣ ಎಂತ ಸಾಗುತ್ತಾ ಎಂಬುದನ್ನು ನಾವು ಅರ್ಥಮಾಡಿಕೊಂಡು ಸ್ಥಳೀಯರಿಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
ಜೆಡಿಎಸ್ ಎಸ್ಟಿ ವಿಭಾಗದ ಅಧ್ಯಕ್ಷ ಎಂ.ಬಾಲಗೋವಿಂದ್, ನಗರಸಭೆ ಮಾಜಿ ಸದಸ್ಯ ಮುಕ್ಕಡ್ ವೆಂಕಟೇಶ್, ಗ್ರಾಪಂ ಸದಸ್ಯ ಛತ್ರಕೋಡಿಹಳ್ಳಿ ಕುಮಾರ್, ಮುಖಂಡ ಭರತ್ ಕುಮಾರ್ ಸೇರಿದಂತೆ ಸೇರ್ಪಡೆಯಾದ ಯುವಕರು ಮುಖಂಡರು ಇದ್ದರು.