ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿಗೆ ಮತನೀಡಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.4: ನಗರದ 21,22 ಮತ್ತು 24ನೇ ವಾರ್ಡ್ ಪ್ರದೇಶದಲ್ಲಿ ಇಂದು  ನಗರದ ಶಾಶಕ ಜಿ. ಸೋಮಶೇಖರ ರೆಡ್ಡಿ ಅವರ  ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯ್ತು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ  ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದೆ. ಬಾಕಿ ಇರುವ ಅಭಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಿಜೆಪಿಗೆ ಮತ ನೀಡಬೇಕೆಂದು ಮನವಿ‌ ಮಾಡಿದರು.
ಸದಾ ನಿಮ್ಮ ಕರೆಗೆ ಓಗೊಡುವಂತ ವ್ಯಕ್ತಿಗೆ ಮತ ನೀಡಿ ಎಂದು ತಾವು ಮತ್ತೊಮ್ಮೆ ಸ್ಪರ್ಧೆ ಮಾಡಲು ಬಯಸಿದ್ದು ಮತ ನೀಡಬೇಕೆಂದು ಕೋರಿದರು.