ಅಭಿವೃದ್ಧಿಗೆ ಮಾರ್ಗದರ್ಶನ: ಶಾಸಕರಿಗೆ ಮನವಿ

ಕೊರಟಗೆರೆ, ನ. ೧೨- ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಕೊಡಿಸುವ ಮೂಲಕ ನಮಗೆ ಮಾರ್ಗದರ್ಶನ ನೀಡಬೇಕು ಎಂದು ಪ.ಪಂ. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೊರಟಗೆರೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅಯ್ಕೆಯಾಗಿ ಚುನಾವಣೆ ನಡೆದು ನೂತನ ಅಧ್ಯಕ್ಷರಾಗಿ ಮಂಜುಳಾ ಸತ್ಯನಾರಾಯಣ್ ಮತ್ತು ಉಪಾಧ್ಯಕ್ಷರಾಗಿ ಭಾರತಿ ಸಿದ್ದಮಲ್ಲಯ್ಯ ಆಯ್ಕೆಯಾದ ನಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಪಟ್ಟಣದ ಅಭಿವೃದ್ದಿಗೆ ಮಾರ್ಗದರ್ಶನ ನೀಡುವಂತೆ ಹಾಗೂ ಪಟ್ಟಣದ ಅಭಿವೃದ್ದಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಮನವಿ ಸಲ್ಲಿಸಿದರು.
ಈ ಸಂದದರ್ಭದಲ್ಲಿ ಪ.ಪಂ.ಸದಸ್ಯರಾದ ಪಟ್ಟನರಸಯ್ಯ, ಕೆ.ಎನ್.ಲಕ್ಷ್ಮಿನಾರಾಯಣ್, ನಟರಾಜ್, ಮುಖಂಡರುಗಳಾದ ಕುದುರೆ ಸತ್ಯನಾರಾಯಣ್, ಸಿದ್ದಮಲ್ಲಪ್ಪ, ರಮೇಶ್, ಗಿರೀಶ್, ಸೈಫುಲ್ಲಾ ಮತ್ತಿತರರು ಉಪಸ್ಥಿತರಿದ್ದರು.