ಅಭಿವೃದ್ಧಿಯೇ ನಮ್ಮ ಮೂಲ ಉದ್ದೇಶ: ಸಚಿವ ಖಂಡ್ರೆ

ಬೀದರ್: ಆ.16:ಸುಮಾರು 200 ವರ್ಷಗಳ ಕಾಲ ಬ್ರಿಟಿಷರ ದಾಸ್ಯಕ್ಕೆ ಸಿಲುಕಿದ್ದ ಭಾರತ ಸ್ವಾತಂತ್ರ್ಯದ ಹಿಂದೆ ಹಲವರ ತ್ಯಾಗ, ಬಲಿದಾನಗಳಿವೆ. 1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದೇ ಖ್ಯಾತವಾದ ಸಿಪಾಯಿ ದಂಗೆಯಿಂದ ಹಿಡಿದು 1947 ರ ಆಗಸ್ಟ್ 14 ರ ಮಧ್ಯ ರಾತ್ರಿಯವರೆಗೆ ನಡೆದ ಸ್ವಾತಂತ್ರ್ಯ ಹೋರಾಟ ಹಲವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು.

ಮಂಗಳವಾರ ಬೀದರ್ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆದ 77 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು .

ಸರ್ಕಾರದ ಮಹತ್ವಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ , ಗೃಹ ಜ್ಯೋತಿ , ಅನ್ನಭಾಗ್ಯ ಯೋಜನೆಗಳು ಈಗಾಗಲೇ ಜಾರಿ ಮಾಡಲಾಗಿದ್ದು , ಈ ಯೋಜನೆಗಳ ಲಾಭ ಸಾರ್ವಜನಿಕರು ಪಡೆಯುತ್ತಿದ್ದಾರೆ . ಹಾಗೂ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆ , ಯುವನಿಧಿ ಯೋಜನೆಗಳನ್ನು ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ . ಈ ನಿಟ್ಟಿನಲ್ಲಿ ಬೀದರ್ ಜಿಲ್ಲೆಯ ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಸಂಕಲ್ಪ ಕೈಗೊಳ್ಳಲಾಗಿದೆ . ಮುಂದಿನ ಐದು ವರ್ಷಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ , ತಾಲೂಕು ಕೇಂದ್ರಗಳ ಆಸ್ಪತ್ರೆಗಳು , ಜಿಲ್ಲಾ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಲು , ಅತ್ಯಾಧುನಿಕ ತಂತ್ರಜ್ಞಾನ ಮತ್ತು ಮೂಲಸೌಕರ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ . ಗುಣಮಟ್ಟದ ಚಿಕಿತ್ಸೆಗಾಗಿ ನಮ್ಮ ಜಿಲ್ಲೆಯ ಜನ ಹೈದ್ರಾಬಾದ್‍ಗೆ ಹೋಗುತ್ತಿದ್ದು , ಬೀದರ್ ಜಿಲ್ಲಾ ಕೇಂದ್ರದಲ್ಲಿ 20 ಕೋಟಿ ರೂ . ವೆಚ್ಚದಲ್ಲಿ ಕ್ಯಾಥಲ್ಯಾಬ್ ಆರಂಭಿಸಲಾಗುವುದು . ಅಪಘಾತದ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ನೀಡಿ ಅಮೂಲ್ಯವಾದ ಜೀವ ರಕ್ಷಿಸಲು ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ಟ್ರಾಮಾ ಕೇಂದ್ರ ತೆರೆಯಲಾಗುವುದು . ಜಿಲ್ಲೆಯ ಶಾಲೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಮತ್ತು ಖಾಲಿ ಇರುವ ಶಿಕ್ಷಕರ ಹುದ್ದೆಗೆ 371 ಜೆ ವಿಶೇಷ ಸ್ಥಾನಮಾನದ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಹಂತ ಹಂತವಾಗಿ ಆರಂಭಿಸಲಾಗುವುದು . ಅಲ್ಲಿಯವರೆಗೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಬೀಳದಂತೆ , ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಕೂಡಲೇ ಗೌರವ ಶಿಕ್ಷಕರ ನೇಮಕ ಮಾಡಲಾಗುತ್ತಿದೆ . ಜೊತೆಗೆ ತಂತ್ರಜ್ಞಾನದ ನೆರವಿನಿಂದ ಗುಣಮಟ್ಟದ ಶಿಕ್ಷಣ ಒದಗಿಸಲು , ಜಿಲ್ಲೆಯ 200 ಪ್ರೌಢ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಅಳವಡಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಪೆÇಲೀಸ್ ತಂಡದಿಂದ ಕರಾಟೆ ಪ್ರದರ್ಶನ , ಅಕ್ಕಾ ಪಡೆಯಿಂದ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ , ಶ್ವಾನ ದಳದಿಂದ ಮಾದಕ ವಸ್ತುಗಳ ಪತ್ತೆಯ ಅಣಕು ಪ್ರದರ್ಶನ ಹಾಗೂ ವಿವಿಧ ಶಾಲಾ ಕಾಲೇಜಿನ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಕಣಮನ ಸೆಳೆದವು.

ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ , ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ , ವಿಧಾನ ಪರಿಷತ್ ಶಾಸಕರಾದ ರಘುನಾಥರಾವ ಮಲ್ಕಾಪೂರೆ, ಅರವಿಂದಕುಮಾರ ಅರಳಿ , ಕರ್ನಾಟಕ ರಾಜ್ಯ ಹಜ್ ಸಮಿತಿ ಅಧ್ಯಕ್ಷ ರವೂಫುದ್ಧಿನ್ ಕಚೇರಿವಾಲೆ ಹಾಗೂ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಪೆÇಲೀಸ್ ಅಧೀಕ್ಷಕ ಚನ್ನಬಸವಣ್ಣ ಲಂಗೋಟಿ, ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ, ಪೆÇಲೀಸ್ ಉಪಾಧೀಕ್ಷಕ ಮಹೇಶ ಮೇಘಣ್ಣನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ – ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.