ಅಭಿವೃದ್ಧಿ ಕಾರ್ಯಕ್ಕೆ ಸಂದ ಜಯ:ಬೈರತಿ

ಕೆ.ಆರ್.ಪುರ,ಮೇ.೧೮-ಕೆ.ಆರ್.ಪುರ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ನನಗೆ ಜಯತಂದು ಕೊಟ್ಟಿದೆ ಎಂದು ಶಾಸಕ ಬೈರತಿ ಬಸವರಾಜ್ ಅವರು ತಿಳಿಸಿದರು. ಕೆ.ಆರ್. ಪುರ ಕ್ಷೇತ್ರದ ಬಸವನಪುರ ವಾರ್ಡನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದಲ್ಲಿ ಹಲವು ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು,ಅದರ ಪ್ರತಿಫಲ ವಾಗಿ ನಾನು ನಾಲ್ಕನೇ ಬಾರಿಗೆ ಶಾಸಕನಾಗಿ ಆಯ್ಕೆ ಯಾಗಿದ್ದೆನೆ ಎಂದು ನುಡಿದರು.
ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದ್ದು,ಮುಂದಿನ ಐದು ವರ್ಷಗಳಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೆನೆ ಎಂದು ತಿಳಿಸಿದರು.
ಅಧಿಕಾರಿಗಳು ಅಭಿವೃದ್ಧಿ ಕಾಮಾಗಾರಿಗಳನ್ನು ಗುಣಮಟ್ಟದಿಂದ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಅನುದಾನವನ್ನು ಸರ್ಮಪಕವಾಗಿ ಬಳಸುವ ಮೂಲಕ ಅಭಿವೃದ್ದಿ ಕಾಮಾಗಾರಿಗಳನ್ನು ಗುಣಮಟ್ಟದಿಂದ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಸಂಘಸಂಸ್ಥೆಗಳ ಜೋತೆ ಚರ್ಚಿಸಿ ಅಗತ್ಯವಿರುವ ಕಾಮಾಗಾರಿಗಳನ್ನು ಹಾಗೂ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಾಗಾರಿಗಳನ್ನು ನಡೆಸಲಾಗುವುದು ಎಂದು ನುಡಿದರು.
ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಚ್ಚುಒತ್ತು ನೀಡಲಾಗುತ್ತಿದ್ದು,ಹಂತಹಂತವಾಗಿ ಸಂಪೂರ್ಣ ಅಭಿವೃದ್ಧಿ ಕಾರ್ಯ ವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಜಯಪ್ರಕಾಶ್, ಮುಖಂಡರಾದ ಮೇಡಹಳ್ಳಿ ಜಗ್ಗಿ,ಕೃಷ್ಣಮೂರ್ತಿ, ರಾಜೇಂದ್ರ, ಶಿವಕುಮಾರ್ ಇದ್ದರು.