ಅಭಿವೃದ್ಧಿ ಕಾರ್ಯಾಗಾರಗಳು ನಿರಂತರವಾಗಿ ನಡೆಯಬೇಕು: ಕುಲಪತಿ ಗಂಗಾಧರ್

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.01:- ದೇಶದ ಅರ್ಥ ವ್ಯವಸ್ಥೆ ಸುಧಾರಣೆಗಾಗಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಯವರಾದ ಪೆÇ್ರ. ಎಂ.ಆರ್. ಗಂಗಾಧರ್ ಅವರು ತಿಳಿಸಿದರು.
ಚಾಮರಾಜನಗರದ ವಿಶ್ವವಿದ್ಯಾನಿಲಯದ ನಿಜಗುಣ ಸಭಾಂಗಣದಲ್ಲಿಂದು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಬಹುಶಿಸ್ತೀಯ ಸಂಶೋಧನೆಯಲ್ಲಿ ಅಂಕಿ ಅಂಶಗಳ ಅನ್ವಯ ವಿಷಯ ಕುರಿತು ಹಮ್ಮಿಕೊಳ್ಳಲಾಗಿದ್ದ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಸಂಶೋಧನೆಗೆ ಸಂಬಂಧಿಸಿದಂತೆ ದೇಶದ ಆರ್ಥಿಕ ವ್ಯವಸ್ಥೆ ಸುಧಾರಿಸಲು ಹಾಗೂ ವಿವಿಧ ಕಲ್ಯಾಣ ಯೋಜನೆಗಳನ್ನು ರೂಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸಹಕಾರಿಯಾಗುವ ಕಾರ್ಯಾಗಾರಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕು. ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ತಮಿಳುನಾಡಿನ ದಿಂಡಿಗಲ್ ಗಾಂಧಿಗ್ರಾಮ ಗ್ರಾಮೀಣ ಸಂಸ್ಥೆಯ ವಿಶ್ರಾಂತ ಕುಲಪತಿಗಳು ಹಾಗೂ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪೆÇ್ರ. ಎಸ್. ಮಾದೇಶ್ವರನ್ ಅವರು ಸಮಾಜ ಉನ್ನತಿ ಹಾಗೂ ದೇಶದ ಅಭಿವೃದ್ದಿಗೆ ಸಂಶೋಧನೆಗಳು ಪ್ರಮುಖ ಪಾತ್ರ ವಹಿಸಬೇಕು. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಸಮಾಜಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳ ಕೊಡುಗೆ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.
ಆರ್ಥಿಕ ನೀತಿಯ ರಚನೆಯಲ್ಲಿ ವಿವಿಧ ಕ್ಷೇತ್ರಗಳ ಹಾಗೂ ವರ್ಗಗಳಿಗೆ ಸಂಬಂಧಿಸಿದ ಮಾಹಿತಿ, ದತ್ತಾಂಶಗಳ ಕ್ರೋಢೀಕರಣ ಮತ್ತು ಅದರ ವಿಶ್ಲೇಷಣೆಯು ವೈಜ್ಞಾನಿಕವಾಗಿ ಹಾಗೂ ನಿಖರವಾಗಿ ನಿರೂಪಣೆಗೆ ಒಳಪಡಬೇಕು. ಇಂತಹ ವೈಜ್ಞಾನಿಕ ವಿಶ್ಲೇಷಣಾ ಸಾಮಥ್ರ್ಯವನ್ನು ಇಂದಿನ ಸಂಶೋಧಕರು, ಅಧ್ಯಾಪಕರು, ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಪೆÇ್ರ. ಎಸ್. ಮಾದೇಶ್ವರನ್ ಅವರು ಕಿವಿಮಾತು ಹೇಳಿದರು.
ವಿಶ್ವವಿದ್ಯಾನಿಲಯದ ಮೌಲ್ಯಾಮಾಪನ ಕುಲಸಚಿವರಾದ ಪೆÇ್ರ. ಪಿ. ಮಾದೇಶ್, ಕಾಲೇಜು ಅಭಿವೃದ್ದಿ ಮಂಡಳಿಯ ನಿರ್ದೇಶಕರಾದ ಪೆÇ್ರ. ಆರ್. ಮಹೇಶ್, ಪಿ.ಎಂ.ಇ.ಬಿ ನಿರ್ದೇಶಕರಾದ ಡಾ. ವಿ.ಜಿ. ಸಿದ್ದರಾಜು, ಅರ್ಥಶಾಸ್ತ್ರ್ರ ಉಪನ್ಯಾಸಕರಾದ ಡಾ. ಟಿ. ಮಹದೇವಸ್ವಾಮಿ, ಡಾ. ಸಂಗಪ್ಪಶಿರೂರು, ಪಿ. ನಂಜುಂಡಸ್ವಾಮಿ, ದೀಪ. ಎನ್ ಮಲ್ಲಿಕಾರ್ಜುನಸ್ವಾಮಿ, ಶಾರದ, ವಿವಿಧ ಕಾಲೇಜು ಅಧ್ಯಾಪಕರು, ವಿದ್ಯಾರ್ಥಿಗಳು, ಇತರರು ಕಾರ್ಯಗಾರದಲ್ಲಿ ಹಾಜರಿದ್ದರು.