ಅಭಿವೃದ್ಧಿ ಹೆಸರಲ್ಲಿ ದೇಶ ಮುನ್ನಡೆಯಬೇಕು: ಮಂಜುನಾಥ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಸೆ.07: ಧರ್ಮದ ಹೆಸರಿನಲ್ಲಿ ದೇಶ ಮುನ್ನಡೆಸಬೇಕೆಂದು ಬಿಜೆಪಿ ಹೊರಟಿದೆ. ಆದರೆ  ಅಭಿವೃದ್ಧಿ ದಿಸೆಯಲ್ಲಿ ದೇಶ ಮುನ್ನಡೆಯಬೇಕೆಂದು ಕಾಂಗ್ರೆಸ್ ಬಯಸುತ್ತದೆಂದು ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್‌. ಮಂಜುನಾಥ ಹೇಳಿದರು.
ಅವರು ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜರುಗಿದೆ ಅಸಂಘಟಿತ ಕಾರ್ಮಿಕ ಮತ್ತು ನೌಕರರ ವಿಭಾಗದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು  ಮಾತನಾಡಿದರು.
ನಾವು ಅಭಿವೃದ್ಧಿಗಾಗಿ ತುಡಿಯುತ್ತೇವೆ. ಬಿಜೆಪಿಯವರು ಧರ್ಮದೆ. ವಿಚಾರಕ್ಕಷ್ಟೇ ಮಿಡಿಯುತ್ತಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊ೦ಡ. ಎಂಟು ವರ್ಷಗಳ ಅವಧಿಯಲ್ಲಿ ದೇಶದ ಪ್ರಗತಿಯತ್ತ ಹೆಜ್ಜೆ ಹಾಕಲಿಲ್ಲ. ಬದಲಿಗೆ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಬಡ ಹಾಗೂ ಮಧ್ಯಮ ಕುಟುಂಬಗಳು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ಈಡೇರಲಿಲ್ಲ. ಮೋದಿ ಅವರ ಆಡಳಿತದಲ್ಲಿ ನಾವು ಉದ್ಯೋಗ ಕಂಡುಕೊಳ್ಳುತ್ತೇವೆ’ ಎಂದು ಆಸೆ. ಹೊತ್ತಿದ್ದ ಯುವ ಸಮುದಾಯಕ್ಕೆ ತೀವ್ರ ನಿರಾಸೆಯಾಗಿದೆ. ಇನ್ನು ಎಂಟು ವರ್ಷಗಳ ಅವಧಿಯಲ್ಲಾದ ಖಾಸಗೀಕರಣ ಈ ಹಿಂದೆ ಎಂದೂ ಆಗಲಿಲ್ಲ. ಲಾಭದಲ್ಲಿರುವ ಉದ್ಯಮಗಳು ಹಾಗೂ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ ಕೇಂದ್ರ ಸರ್ಕಾರ ಯಾರ ಹಿತ ಕಾಯಲು ಅಧಿಕಾರಕ್ಕೆ ಬಂತು ಎಂಬ ಪ್ರಶ್ನೆ ಮೂಡಿದೆ ಎಂದರು.
ಬ್ರಿಟಿಷರು ಈ ದೇಶವನ್ನು ಬಿಟ್ಟು ಹೋಗುವಾಗ 19 ವಿಶ್ವವಿದ್ಯಾಲಯಗಳನ್ನು ಮಾತ್ರ ಬಿಟ್ಟು ಹೋಗಿದ್ದರು. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ 145 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಯಿತು. ಈ ಮೂಲಕ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಲಾಯಿತು. ಆದರೆ, ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ 8 ವರ್ಷಗಳ ಅವಧಿಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯ ಸ್ಥಾಪಿಸಲಿಲ್ಲ ಎಂದು ಆರೋಪಿಸಿದರು.
ನಿರುದ್ಯೋಗ ಸಮಸ್ಯೆಗಳ ಕುರಿತು ವಿದ್ಯಾರ್ಥಿ-ಯುವಜನರು ಚರ್ಚಿಸುವಂತಾಗಬೇಕು. ಕೇಂದ್ರದ ನೀತಿಗಳು ಹಾಗೂ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಕೆಲಸಗಳನ್ನು ತುಲನೆ ಮಾಡಬೇಕು. ಬಿಜೆಪಿ ಸರ್ಕಾರ ಈ ದೇಶವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದೆ. ಅಭಿವೃದ್ಧಿ ಕಡೆಗೋ ಅಥವಾ ಅವನತಿಯ ಕಡೆಗೋ ಎಂಬುದನ್ನು ಪ್ರತಿಯೊಬ್ಬರೂ ಮಾಡಿಕೊಳ್ಳಬೇಕು ಎಂದರಲ್ಲದೆ, ಬೀದಿಬದಿಯ ಕಾರ್ಮಿಕರು, ಹೋಟೆಲ್ ಕಾರ್ಮಿಕರು, ಕೃಷಿ ಕಾರ್ಮಿಕರು ಸೇರಿದಂತೆ ರಾಜ್ಯದಲ್ಲಿ 85 ಲಕ್ಷ ಅಸಂಘಟಿತ ಕಾರ್ಮಿಕರಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್‌ನಿಂದ . ಅಸಂಘಟಿತ ಕಾರ್ಮಿಕರನ್ನು ಸಂಘಟಿಸುವ ಕೆಲಸವಾಗುತ್ತಿದೆ. ಕಾರ್ಮಿಕರ ಹಕ್ಕುಗಳು ಹಾಗೂ ಅವರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಅಲುವೇಲು ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗ ಉಪಾಧ್ಯಕ್ಷ ಪೊಲೀಸ್‌ ಗೌಡ, ಚಿತ್ರದುರ್ಗ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್‌ ಪೂಜಾರಿ, ಅಸಂಘಟಿತ ಕಾರ್ಮಿಕ ರಾಜ್ಯ ಕಾರ್ಯದರ್ಶಿ ಸಂದೀಪ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸೋಮಣ್ಣ, ಬಳ್ಳಾರಿ: ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಕಲ್ಲುಕಂಬ ಪಂಪಾಪತಿ, ಎಲ್. ಮಾರಣ್ಣ, ಮಾಜಿ ಮೇಯರ್ ವೆಂಕಟರಮಣ, ಸುನೀಲ್ ರಾವೂರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಮಂಜುಳಾ, ಪಾಲಿಕೆ ಸದಸ್ಯರಾದ ಕುಬೇರ, ವಿಕ್ಕಿ ಮತ್ತಿತರರು

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಗೊಂಡ ಜಿಲ್ಲಾ ಅಸಂಘಟಿತಕಾರ್ಮಿಕವಿಭಾಗದಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ವಿತರಿಸಲಾಯಿತು.