ಅಭಿಷೇಕ್ ದತ್ತ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ

ಕಲಬುರಗಿ:ಜ.20: ಕಲ್ಯಾಣ ಕರ್ನಾಟಕ (ವಿಭಾಗದ) ಭಾಗದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ ದತ್ ಅವರಿಂದ ಜನವರಿ 21ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಮುಖಂಡರ ಸಭೆ ಜರುಗಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.
ಲೋಕಸಭೆ ಸದಸ್ಯರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಈ ಹಿಂದೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಪಕ್ಷದಿಂದ ಸ್ಫರ್ಧಿಸಿದ ಅಭ್ಯರ್ಥಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮುಂಚೂಣಿ ಘಟಕ, ವಿಭಾಗ,ಸೆಲ್‍ಗಳ ಅಧ್ಯಕ್ಷರುಗಳ ಸಭೆಯನ್ನು ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಸಭೆಗೆ ಹಾಜರಾಗಬೇಕು ಎಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.