ಅಮರೇಶ್ವರನ ದರ್ಶನ ಪಡೆದ ಸಚಿವ ಈಶ್ವರ.ಬಿ.ಖಂಡ್ರೆ

ಔರಾದ್ : ಮಾ.9:ಮಹಾ ಶಿವರಾತ್ರಿ ನಿಮಿತ್ತ ನಡೆಯುವ ಐತಿಹಾಸಿಕ ಪ್ರತೀತಿ ಹೊಂದಿರುವ ಉದ್ಭವಲಿಂಗ ಅಮರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರು ಅಮರೇಶ್ವರ ದರ್ಶನ ಪಡೆದರು.

ಅಮರೇಶ್ವರ ಜಾತ್ರಾ ಮಹೋತ್ಸವದ ನಾಲ್ಕನೇ ದಿನ ಅಮರೇಶ್ವರ ದೇಗುಲಕ್ಕೆ ಭೇಟಿ ನೀಡಿದ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪಲ್ಲಕ್ಕಿ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಅಮರೇಶ್ವರ ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಬಸವರಾಜ ದೇಶಮುಖ, ಡಾ. ಶಂಕರರಾವ ದೇಶಮುಖ, ಸುನೀಲಕುಮಾರ ದೇಶಮುಖ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಸುಧಾಕರ ಕೊಳ್ಳುರ, ಸಾಯಿನಾಥ ಘೋಡಕೆ, ಶಂಕು ನಿಶ್ಪತೆ, ಅನಿಲ ಬೆಲೂರೆ, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.