ಅಮರೇಶ ಬಲ್ಲಿದವ್ ಕಾಂಗ್ರೆಸ್‌ಗೆ ರಾಜೀನಾಮೆ

ದೇವದುರ್ಗ,ಮಾ.೦೭- ರಾಯಚೂರು ಕೃಷಿ ವಿಜ್ಞಾನಗಳ ವಿವಿ ವ್ಯವಸ್ಥಾಪನಾ ಮಂಡಳಿ ಮಾಜಿ ಸದಸ್ಯ ಅಮರೇಶ ಬಲ್ಲಿದವ್ ವೈಯಕ್ತಿಕ ಕಾರಣ ನೀಡಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಮಟದಲ್ಲಿ ಕಾಂಗ್ರೆಸ್ ತೆಗೆದುಕೊಂಡ ನೀತಿನಿರ್ಧಾರಗಳು ಹಾಗೂ ಸ್ಥಳೀಯವಾಗಿ ಪಕ್ಷದಲ್ಲಿನ ಅಸಹಜ ಬೆಳವಣಿಗೆಯಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಹಪಾಠಿಗಳ, ಹಿತೈಸಿಗಳ ಜತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಮರೇಶ ಬಲ್ಲಿದವ್ ಅವರನ್ನು ಕಾಂಗ್ರೆಸ್ ೨೦೧೭ರಿಂದ ೨೦೨೦ರವರೆಗೆ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ಸದಸ್ಯರನ್ನಾಗಿ ನೇಮಕ ಮಾಡಿತ್ತು.