ಅಮಾನುಲ್ಲಾ ಕಿಲ್ಲೇದಾರಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಅಥಣಿ : ಸೆ.4:ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2023-24 ರ ಸಾಲಿನ ಪ್ರಾಥಮಿಕ ಹಾಗು ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು ಈ ಬಾರಿ ಪ್ರೌಢಶಾಲಾ ವಿಭಾಗದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಮಾನುಲ್ಲಾ ಕಾದಿರ್ ಕಿಲ್ಲೇದಾರ ಆಯ್ಕೆಯಾಗಿದ್ದಾರೆ.
ಅಮಾನುಲ್ಲಾ ಕಾದಿರ ಕಿಲ್ಲೇದಾರ, ಮೂಲತಃ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದವರು, ದಿ, 31/07/2013 ರಲ್ಲಿ ಅವರು ತಾಲೂಕಿನ ಸಿದ್ದೇವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯಕ್ಕೆ ಸೇರಿದರು, ಈಗ ಪ್ರಸ್ತುತ ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ,
ಕಳೆದ ಹತ್ತು ವರ್ಷಗಳಿಂದ ತಾಲೂಕಿನಲ್ಲಿ ಹಿಂದಿ ಶಿಕ್ಷಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಇವರು ನಾಳೆ ಸೆಪ್ಟಂಬರ್ 5 ರಂದು ಚಿಕ್ಕೋಡಿಯಲ್ಲಿ ಜರುಗುವ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಲಿರುವ ಅಮಾನುಲ್ಲಾ ಕಾದಿರ್ ಕಿಲ್ಲೇದಾರ ಅವರಿಗೆ ತಾಲೂಕ ಆಡಳಿತ, ಶಾಲೆಯ ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ, ಪಾರ್ಥನಹಳ್ಳಿ ಗ್ರಾಮಸ್ಥರು, ಹಾಗೂ ಅಥಣಿ ನಾಗರಿಕರು ಅಭಿನಂದಿಸಿ ಶುಭ ಕೋರಿದ್ದಾರೆ.