ಅಮಿತಾ ಬಚ್ಚನ್ ಚೇತರಿಕೆ: ಬಿಡುಗಡೆ

ಮುಂಬೈ,ಆ.2- ಕರೋನಾ ಸೋಂಕಿನಿಂದ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಬಿಗ್ ಬಿ ಅಮಿತಾ ಬಚ್ಚನ್ ಚೇತರಿಸಿಕೊಂಡು ಇಂದು ಬಿಡುಗಡೆಯಾಗಿದ್ದಾರೆ.

ಸದ್ಯ ಅವರ ಪುತ್ರ ಅಭಿಷೇಕ್ ಬಚ್ಚನ್ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದಾರೆ.

ತಂದೆ ಅಮಿತಾಬ್ ಬಚ್ಚನ್ ಅಂತಿಮವಾಗಿ ಸೊಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಅಭಿಷೇಕ್ ಬಚ್ಚನ್ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅಭಿಷೇಕ್ ಬಚ್ಚನ್‌ “ನನ್ನ ತಂದೆಯವರ ಇತ್ತೀಚಿನ ಕೋವಿಡ್ -19 ಪರೀಕ್ಷೆಯಲ್ಲಿ ನೆಗೆಟೀವ್ ಬಂದಿದೆ. ಹೀಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಸದ್ಯ ಅವರು ಮನೆಯಲ್ಲಿರುತ್ತಾರೆ ಮತ್ತು ವಿಶ್ರಾಂತಿ ಪಡೆಯುತ್ತಾರೆ. ನಿಮ್ಮ ಎಲ್ಲಾ ಪ್ರಾರ್ಥನೆಗಳಿಗೆ ಧನ್ಯವಾದಗಳು ಮತ್ತು ಅವರಿಗೆ ಶುಭಾಶಯಗಳು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸೊಸೆ ಹಾಗು ನಟಿ ಐಶ್ವರ್ಯ ಬಚ್ಚನ್, ಮೊಮ್ಮಗಳು ಆರಾಧ್ಯ ಬಚ್ಚನ್ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದರು.

ಆಸ್ಪತ್ರೆಯಿಂದ ಮನೆಗೆ:

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ಅಮಿತಾ ಬಚ್ಚನ್ ಅವರು ಆಸ್ಪತ್ರೆಯ ಆಂಬುಲೆನ್ಸ್ ಮೂಲಕ ಬಾಂದ್ರಾದಲ್ಲಿರುವ ಮನೆಗೆ ಮರಳಿದರು.
ಮನೆಯಲ್ಲಿ ಅವರು ಕೆಲದಿನಗಳ ಕಾಲ ಚಿಕಿತ್ಸೆ ವಿಶ್ರಾಂತಿ ಪಡೆಯಲಿದ್ದಾರೆ.