ಅಮಿತ್ ದೆಹಲಿ ಕೋರ್ಟ್‌ನ ಖಾಯಂ ನ್ಯಾಯಾಧೀಶ

ನವದೆಹಲಿ, ಮಾ. ೬- ನ್ಯಾಯಮೂರ್ತಿ ಅಮಿತ್ ಶರ್ಮಾ ಅವರು ದೆಹಲಿ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಪ್ರಮಾಣ ವಚನ ಬೋಧಿಸಿದರು.

ಈ ಹಿಂದೆ ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಅವರು ಜೂನ್ ೨೦೨೨ ರಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಕಾನೂನು ಮತ್ತು ನ್ಯಾಯ ಸಚಿವಾಲಯ ಕಳೆದ ವಾರ ನ್ಯಾಯಮೂರ್ತಿ ಶರ್ಮಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಸೂಚನೆ ನೀಡಿತ್ತು.

ಸುಪ್ರೀಂ ಕೋರ್ಟ್ ಕೊಲಿಜಿಯಂ ಇತ್ತೀಚೆಗೆ ದೆಹಲಿ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್‌ಗಳಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕ ಮಾಡಲು ವಿವಿಧ ಹೆಚ್ಚುವರಿ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ. ಕೊಲಿಜಿಯಂ ತನ್ನ ನಿರ್ಣಯದಲ್ಲಿ ನ್ಯಾಯಮೂರ್ತಿ ಅಮಿತ್ ಶರ್ಮಾ, ಹೆಚ್ಚುವರಿ ನ್ಯಾಯಾಧೀಶರನ್ನು ದೆಹಲಿಯ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸಲು ಶಿಫಾರಸು ಮಾಡಿದೆ. ದೆಹಲಿಯ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಗೆ ಸಂಬಂಧಿಸಿದ ಕಡತದಲ್ಲಿ, ಹೆಚ್ಚುವರಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಅಮಿತ್ ಶರ್ಮಾ ಅವರು ಸೂಕ್ತರು ಎಂದು ಪರಿಗಣಿಸಲಾಗಿದೆ ಎಂದು ಕೊಲಿಜಿಯಂ ಹೇಳಿದೆ.