ಅಮಿತ್ ಶಾ ಅಣಕು ಶವಯಾತ್ರೆ, ಅರೆಬೆತ್ತಲೆ ಪ್ರತಿಭಟನೆ ನಡೆಸಿ ಕಬ್ಬು ಬೆಳೆಗಾರರ ಆಕ್ರೋಶ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಫೆ.24- ದೆಹಲಿ ಚಲೋ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಪೆÇಲೀಸ್ ಬಳಸಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಚಾಮರಾಜನಗರದಲ್ಲಿ ಕಬ್ಬು ಬೆಳೆಗಾರರರು ಪ್ರತಿಭಟನೆ ನಡೆಸಿದರು.
ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದ ತನಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಣಕು ಶವಯಾತ್ರೆ ನಡೆಸಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಇನ್ನು, ಭುವನೇಶ್ವರಿ ವೃತ್ತದಲ್ಲಿ ಅಣಕು ಶವವನ್ನು ಪೆÇಲೀಸರು ವಶಕ್ಕೆ ಪಡೆದ ಹಿನ್ನೆಲೆ ರೊಚ್ಚಿಗೆದ್ದ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಜಿಲ್ಲಾಡಳಿತ ಭವನದ ತನಕ ಪ್ರತಿಭಟನೆ ಮೆರವಣಿಗೆ ನಡೆಸಿ ರೈತರ ವಿರುದ್ಧ ದೌರ್ಜನ್ಯ ನಿಲ್ಲಿಸಬೇಕು ಹಾಗೂ ಹಕ್ಕೊತ್ತಾಯಗಳನ್ನು ಕೂಡಲೇ ಜಾರಿ ಮಾಡಬೇಕೆಂದು ರಾಷ್ಟ್ರಪತಿಗಳಿಗೆ ತಹಶಿಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿದರು.