
ಕಲಬುರಗಿ:ಎ.9: ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ ಎಂದು ಕರವೇ (ಕನ್ನಡಿಗರ ಬಣ) ಜಿಲ್ಲಾದ್ಯಕ್ಷ ಅಶ್ವಿನಕುಮಾರ ರಂಗದಾಳ ಆರೋಪಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಇದು ಸ್ಪಷ್ಟ , ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೆÇೀಟಿ ಯಾರಿಗೂ ಹಿತವಲ್ಲ. ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ. ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್ ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ. ಹೆಚ್.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಹೆಚ್.ಡಿ.ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್’ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ ಎಂದು ಮಾಹಿತಿ ನೀಡಿರುವ ಅವರು, ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್’ಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್’ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಅವಿನಾಶ ಗುತ್ತೇದಾರ, ಲಿಂಗರಾಜ ದೇವಣಿ,ಗುರು ಜಬಾಡೆ,ಅಲೋಕ ವೈಚೊಳೆ,ಆನಂದ ಮಾಲಿಪಾಟೀಲ,ದಶರಥ ಸೊಳಂಕೆ,ದತ್ತು ಕಾಂಬಳೆ,ಹರೀಶ ರಂಗದಾಳ, ಇತರರು ಇದ್ದರು.