ಅಮೃತ ಅಪಾರ್ಟ್ ಮೆಂಟ್ ಫಸ್ಟ್ ಲುಕ್ ಬಿಡುಗಡೆ

ಕಾಮಿಡಿ, ಸಸ್ಪೆನ್ಸ್, ಥ್ರಿಲ್ಲರ್ ಅಂಶಗಳನ್ನೇ ಅಮೃತಾ ಅಪಾರ್ಟ್ ಮೆಂಟ್ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಗುರುರಾಜ್ ಕುಲಕರ್ಣಿ (ನಾಡಗೌಡ) ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ,ನಿರ್ಮಾಪಕಿ ವಿಜಯಲಕ್ಷ್ಮೀ ಸಿಂಗ್​ ಫಸ್ಟ್ ಲುಕ್ ಬಿಡುಗಡೆ ಮಾಡಿ ತಂಡಕ್ಕೆ ಹಾರೈಸಿದರು

ನಿರ್ದೇಶಕ, ನಿರ್ಮಾಪಕ‌ ಗುರುರಾಜ್, ಬೆಂಗಳೂರಿನ ಕಥೆ. ಐಟಿಬಿಟಿ ಅನ್ನೋ ಈ ಜಮಾನಾದ ಕಥೆ. ಬೆಂಗಳೂರಿಗರು ಸದ್ಯ ಏನಾಗುತ್ತಿದ್ದಾರೆ ಎಂಬುದನ್ನು ಈ ಸಿನಿಮಾ ಮೂಲಕ ಸಸ್ಪೆನ್ಸ್ ಶೈಲಿಯಲ್ಲಿ ತೋರಿಸಿದ್ದೇವೆ. ಒಡೆದು ಹೋದ ಮನಸ್ಸುಗಳನ್ನು ಒಂದು ಮಾಡುವ ಕೆಲಸ ಈ ಸಿನಿಮಾದಲ್ಲಿ ಆಗಿದೆ. ಅದು ಹೇಗೆ ಎಂಬುದನ್ನು ಸಿನಿಮಾದಲ್ಲಿಯೇ ನೋಡಬೇಕಂತೆ ಎಂದರು

ನಾಯಕ ತಾರಕ್ ಪೊನ್ನಪ್ಪ. ಮಾಸ್ ಮಸಾಲಾ ಸಿನಿಮಾ ಅಲ್ಲ. ನಟನೆಗೆ ಹೆಚ್ಚು ಪ್ರಾಮುಖ್ಯತೆ ಇರುವ ಚಿತ್ರ. ಒಂದೊಳ್ಳೆ ಕಂಟೆಂಟ್ ಇರುವ ಸಿನಿಮಾ ಹುಡುಕುತ್ತಿದ್ದಾಗ ಸಿನಿಮಾ ಸಿಕ್ಕಿತ್ತು. ಅಷ್ಟೇ ಚೆನ್ನಾಗಿ ಮೂಡಿಬಂದಿದೆ ಎಂದರು.

ನಟಿ ಮಾನಸಾ ಜೋಷಿ, ಲಾಸ್ಟ್ ಬಸ್​ ಸಿನಿಮಾದ ಬಹುತೇಕ ತಂಡವೇ ಚಿತ್ರಕ್ಕೂ ಕೆಲಸ ಮಾಡಿದೆ. ಚಿತ್ರದಲ್ಲಿ ಎಸಿಪಿ ರತ್ನಪ್ರಭ ಪಾತ್ರ ಮಾಡಿದ್ದೇನೆ ಎಂದರು.

ಪ್ರಮುಖ ಪಾತ್ರ ಮಾಡಿರುವ ಬಾಲಾಜಿ ಮನೋಹರ್‌ , ಸಣ್ಣ ಬಜೆಟ್​ನ ಸಿನಿಮಾ ಆದರೆ, ದೊಡ್ಡ ಐಡಿಯಾದೊಂದಿಗೆ ತಯಾರಾಗಿದೆ. ಆಟೋ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು

ಅರ್ಜುನ್ ಅಜಿತ್ ಛಾಯಾಗ್ರಹಣ, ಕೆಂಪರಾಜ್ ಅರಸ್ ಸಂಕಲನ, ಎಸ್.ಡಿ ಅರವಿಂದ್ 3ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ.

ಮಾಲತೇಶ್, ಸಿತಾರ, ಜಗದೀಶ್ ಜಾಲಾ, ಅರುಣ್ ಮೂರ್ತಿ, ರಾಜು ನೀನಾಸಂ, ಶಂಕರ್ ಶೆಟ್ಟಿ ರಂಗಸ್ವಾಮಿ ಪಾತ್ರವರ್ಗದಲ್ಲಿದ್ದಾರೆ.