ಅಮೃತ ಮಹೋತ್ಸವದ ಅಂಗವಾಗಿ ಎಲ್.ವಿ.ಡಿ ಮೈದಾನದಲ್ಲಿ ಸಸಿನೆಡುವ ಕಾರ್ಯಕ್ರಮ

ರಾಯಚೂರು.ಆ.೦೫- ಮಹಾವಿದ್ಯಾಲಯದ ರಾಷ್ಟ್ರೀಯ ಸೇವ ಯೋಜನೆ ಘಟಕದಿಂದ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ೭೫ ಸಸಿಗಳನ್ನು ನೆಡಲಾಯಿತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಪವನ ಕುಮಾರ ಸುಖಾಣಿ ಅಧ್ಯಕ್ಷರು ಆಡಳಿತ ಮಂಡಳಿ ಎಲ್.ವಿ.ಡಿ ಕಾಲೇಜು ಇವರು ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರವನ್ನು ರಕ್ಷಣೆ ಮಾಡಲಿಕ್ಕೆ ಸಹಾಯಕವಾಗುತ್ತದೆ ಎಂದು ಹೇಳಿದರು.
ಪ್ರತಿಯೊಬ್ಬರು ಪ್ರಸ್ತುತ ದಿನಗಳಲ್ಲಿ ತಾಪಮಾನವನ್ನು ಕಡಿಮೆ ಮಾಡುವುದಕ್ಕೆ ಹೆಚ್ಚು-ಹೆಚ್ಚು ಗಿಡಗಳನ್ನು ನೆಡುವುದು ನಮ್ಮ ನಿಮ್ಮಲ್ಲರ ಜವಾಬ್ದಾರಿಯಾಗಿದೆ. ಇಂಥಹ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕ ಹಮ್ಮಿಕೊಂಡಿರುವುದು ಸಂತಸವೆನಿಸುತ್ತದೆ. ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಕೆ.ನಾಗನಗೌಡ, ಗುರುಶಂಕರ, ಭವೇಶ ಶಾಹ, ದಿನೇಶ ಬೊಹ್ರಾ ಮತ್ತು ಪ್ರತೀಕ ಜಿ. ದೇಸಾಯಿ ಇವರು ಸಸಿಗಳನ್ನು ನೆಟ್ಟು ಇವುಗಳನ್ನು ಕಾಪಾಡಿಕೊಂಡು ಬೆಳಸುವ ಪ್ರತಿಜ್ಞೆಯನ್ನು ಮಾಡಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ವೆಂಕಟೇಶ ಬಿ ದೇವರು ವಹಿಸಿಕೊಂಡಿದರು. ಎನ್.ಎಸ್.ಎಸ್ ಅಧಿಕಾರಿಯಾದ ಚನ್ನಾರೆಡ್ಡಿಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ನಮ್ಮ ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಎನ್.ಎಸ್.ಎಸ್ ಸ್ವಯಂ ಸೇವಕರು ಪಾಲ್ಗೊಂಡು ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.