ಅಮೃತ ಸರೋವರ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ – ಮಲ್ಲಪ್ಪ

ನರೇಗಾ ಯೋಜನೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ರಾಯಚೂರು,ಸೆ.೧೬- ನರೇಗಾ ಯೋಜನೆ ಕೇಂದ್ರ ಸರ್ಕಾರ ಯೋಜನೆಯಾಗಿದ್ದು, ಈ ಯೋಜನೆ ಅಡಿಯಲ್ಲಿ ಅಮೃತ ಸರೋವರ ಕಾಮಗಾರಿಗಳು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಇಂಜಿನಿಯರ್ ಸಿ.ಕೆ.ಮಲ್ಲಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಮೃತ ಸರೋವರ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷೆತೆ ವಹಿಸಿ ಮಾತನಾಡಿದ ಅವರು, ನರೇಗಾ ಯೋಜನೆ ಅಡಿಯಲ್ಲಿ ೨೬೨ ಕಾಮಗಾರಿಗಳಿದ್ದು,ಇದರಲ್ಲಿ ಅಮೃತ ಸರೋಪವ ಸೇರಿದಂತೆ ವಿವಿಧ ಕಾಮಗಾರಿಗಳು ಇವೆ ಎಂದರು.
ಮಳೆ ನೀರನ್ನು ಯಾವ ರೀತಿ ಸಂಗ್ರಹಿಸಬೇಕು ಎಂಬ ಕಾರ್ಯಗಳ ಕುರಿತು ಜಿಲ್ಲೆಯ ಎಲ್ಲಾ ಪಿಡಿಓ ಗಳು ತರಬೇತಿಯನ್ನು ಪಡೆದು ಉತ್ತಮವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪ್ರಗತಿ ಸಾಧಿಸಬೇಕು ಸಲಹೆ ನೀಡಿದರು.
ಕಾಮಗಾರಿಗೆ ಸಂಬಂಧಿ ಪಟ್ಟಂತೆ ಪ್ರತಿಯೊಂದು ಮಾಹಿತಿಯನ್ನು ತಮ್ಮ ತಮ್ಮ ಡಿಪಿಆರ್ ನಲ್ಲಿ ನಮೂದಿಸಬೇಕು ಎಂದ ಅವರು ಕಾಮಗಾರಿಯಲ್ಲಿ ಪ್ರತ್ಯಕ್ಷ್ಯತೆ ಇರಬೇಕು.ಆಯಾ ವರ್ಷದಲ್ಲಿ ಮಾಡಬೇಕಾದ ಕಾಮಗಾರಿಗಳನ್ನು ಅದೇ ವರ್ಷದೊಳಗೆ ಪೂರ್ವಗೊಳಿಸಬೇಕು ಎಂಡುರು.
ಈ ಸಂದರ್ಬದಲ್ಲಿ ಜಿಲ್ಲೆಯ ಎಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಓಗಳು ಇದ್ದರು.