ಅಮೆರಿಕದಲ್ಲಿ ಒಂದೇ ದಿನ ದಾಖಲೆಯ ಸಾವು

ವಾಷಿಂಗ್ಟನ್, ಜ. 8- ಅಮೆರಿಕದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚಿಗೆ ಆಗುತ್ತಿದ್ದು ಒಂದೇ ಸರಿ ಸುಮಾರು 4 ಸಾವಿರ ಮಂದಿ ಮೃತಪಟ್ಟಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕಿಗೆ ಸಾವನ್ನಪ್ಪಿದವರ ಅತಿ ಹೆಚ್ಚಿನ ಸಂಖ್ಯೆಯ ಸಾವು ಇದಾಗಿದೆ ಎಂದು ಅಮೇರಿಕಾದ ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಅಮೆರಿಕದ ವಿವಿಧ ರಾಜ್ಯಗಳಲ್ಲಿ ಕಳೆದ 24 ಗಂಟೆಗಳಲ್ಲಿ 3998 ಮಂದಿ ಮೃತಪಟ್ಟಿದ್ದಾರೆ.

ಅಮೆರಿಕದಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2,65, 246 ಕ್ಕೆ ಏರಿಕೆಯಾಗಿದೆ ಎಂದು ವಿಶ್ವವಿದ್ಯಾಲಯ ತನ್ನ ಮಾಹಿತಿಯಲ್ಲಿ ತಿಳಿಸಿದೆ.