ಅಮೆರಿಕದಲ್ಲಿ ಒಮಿಕ್ರಾನ್ ಪತ್ತೆ ಕಟ್ಟೆಚ್ಚರ

ವಾಷಿಂಗ್ಟನ್,ಡಿ.೨- ದಕ್ಷಿಣ ಆಫ್ರಿಕಾ ಸೇರಿದಂತೆ ಜಗತ್ತಿನ ವಿವಿಧ ದೇಶಗಳಲ್ಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಕೊರೊನಾ ಸೋಂಕಿನ ಹೊಸ ರೂಪಾಂತರ ” ಒಮಿಕ್ರಾನ್” ಅಮೆರಿಕಕ್ಕೂ ಕಾಲಿಟ್ಟಿದೆ.

ಈಗಾಗಲೇ ಕೊರೊನಾ ಸೋಂಕು ಮತ್ತು ಸಾವಿನಿಂದ ವಿಶ್ವದಲ್ಲಿ ಅತಿ ಹೆಚ್ಚು ಬಾಧಿತರಾಗಿರುವ ದೊಡ್ಡಣ್ಣ ಅಮೆರಿಕ ದಲ್ಲಿ ಇದೀಗ ಹೊಸ ಮಾದರಿಯಲ್ಲಿ ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕಕ್ಕೆ ಎಡೆಮಾಡಿದ್ದು ಅಮೆರಿಕದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಅಮೆರಿಕದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಟ್ಟುತ್ತಿರುವ ವಹಿಸುವ ಜತೆಗೆ ಎಲ್ಲೆಡೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಎರಡು ಲಸಿಕೆ ಪಡೆದಿದ್ದ ಕ್ಯಾಲಿಫೋರ್ನಿಯಾದ ವ್ಯಕ್ತಿಯೊಬ್ಬರಿಗೆ ಹೊಸ ರೂಪಾಂತರ ಒಮಿಕ್ರಾನ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ರೂಪಾಂತರ ತಳಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿಂದ ಅಮೆರಿಕಕ್ಕೆ ಬರುವ ಪ್ರಯಾಣಿಕರಿಗೆ ಅಧ್ಯಕ್ಷ ಜೋ ಬೈಡನ್ ನೇತೃತ್ವದ ಆಡಳಿತ ನಿಷೇಧ ಹೇರಿದೆ.

ಕ್ಯಾಲಿಫೋರ್ನಿಯಾದ ವ್ಯಕ್ತಿಗೆ ಹೊಸ ರೂಪಾಂತರಿಸುವ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೋಂಕು ಕಾಣಿಸಿಕೊಂಡ ವ್ಯಕ್ತಿ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನು ಆರೋಗ್ಯ ಅಧಿಕಾರಿಗಳು ಸಂಪರ್ಕ ಮಾಡಿ ಅವರ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ತನಿಖೆಗೆ ಕಳಿಸಿದ್ದಾರೆ.

ನವೆಂಬರ್ ೨೨ರಂದು ದಕ್ಷಿಣ ಆಫ್ರಿಕಾದಿಂದ ಕ್ಯಾಲಿಫೋರ್ನಿಯಾಕ್ಕೆ ಬಂದ ವ್ಯಕ್ತಿ ಏಳು ದಿನಗಳ ಕಾಲ ನಂತರ ಹೊಸ ಮಾದರಿಯ ಓಮಿಕ್ರಾನ್ ಪತ್ತೆಯಾಗಿದೆ. ಎಂದು ಅಮೆರಿಕದ ಸಾರ್ವಜನಿಕ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಶ್ವೇತಭವನದ ಮುಖ್ಯ ಆರೋಗ್ಯ ಅಧಿಕಾರಿ ಡಾ. ಅಂಟೋನಿ ಫಾಸಿ, ಅವರು ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿ ಸಂಪೂರ್ಣವಾಗಿ ಎರಡು ಲಸಿಕೆಯನ್ನು ಪಡೆದಿದ್ದಾರೆ ಅವರು ಹೆಚ್ಚುವರಿ ಡೋಸ್ ಲಸಿಕೆಯನ್ನು ಪಡೆದಿರಲಿಲ್ಲ. ಎಂದು ಅವರು ತಿಳಿಸಿದ್ದಾರೆ.

ಅಮೆರಿಕದಲ್ಲೂ ಹೊಸ ಮಾದರಿಯ ರೂಪಾಂತರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲಬಾರಿಗೆ ಕಾಣಿಸಿಕೊಂಡು ವಿವಿಧ ದೇಶಗಳಿಗೆ ಹರಡಿರುವ ಹೊಸ ಮಾದರಿಯ ಸೋಂಕು ಜಗತ್ತಿನ ವಿವಿಧ ಭಾಗಗಳಲ್ಲಿ ತಲ್ಲಣ ಮೂಡಿಸಿದೆ.