ಅಮೆರಿಕದಲ್ಲಿ ಸೋಂಕು ಗಣನೀಯ ಏರಿಕೆ

ವಾಷಿಂಗ್ಟನ್, ನ.೧೧- ಅಮೆರಿಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತದೆ. ಕಳೆದ ಹತ್ತು ದಿನಗಳಲ್ಲಿ ೧೦ ಲಕ್ಷಕ್ಕೂ ಅಧಿಕ ಮಂದಿಗೆ ಹೊಸದಾಗಿ ಸೋಂಕು ಧೃಡಪಟ್ಟಿದೆ.
ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಮತ್ತು ಸಾವಿಗೆ ಕಾರಣವಾಗಿರುವ ಅಮೆರಿಕದಲ್ಲಿ ಸೋಂಕಿನ ಪ್ರಮಾಣ ನಿಲ್ಲುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಇದು ಸಹಜವಾಗಿ ಚುನಾಯಿತ ಅಧ್ಯಕ್ಷ ಜೋ ಬೈಡನ್‌ಗೆ ಹೊಸ ಸವಾಲಾಗಿ ಪರಿಣಮಿಸಿದೆ.
ಅಮೆರಿಕದ ವಿವಿಧ ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ ಅದಕ್ಕೆ ಕಾರಣ ಇತ್ತೀಚೆಗೆ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜನರು ಒಂದೆಡೆ ಕಲೆತಿದ್ದುದೇ ಕಾರಣ ಎನ್ನುವ ಸಂಗತಿ ಬಯಲಾಗಿದೆ.
ವಿಲ್ಕಿನ್ ಸನ್ ರಾಜ್ಯದ ರಾಜ್ಯಪಾಲರು ಸೋಂಕಿನ ವಿರುದ್ಧ ಹೋರಾಡಲು ಎಲ್ಲರ ಸಹಕಾರ ಸಹಭಾಗಿತ್ವ ಅಗತ್ಯವಿದೆ. ಆಗ ಮಾತ್ರ ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ಬಾರ್ ಗಳ ಸಮಕ್ಕೆ ಕಡಿವಾಣ:
ಮಿನ್ನೆಸೋಟ ರಾಜ್ಯದಲ್ಲಿ ಅಲ್ಲಿನ ರಾಜ್ಯಪಾಲರು ರಾತ್ರಿ ಹತ್ತು ಗಂಟೆಯ ನಂತರ ಎಲ್ಲಾ ಬಾರ್ ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.
ಒಳಾಂಗಣದಲ್ಲಿ ಕನಿಷ್ಠ ೨೫ ಮಂದಿ ಸೇರುವ ಸ್ಥಳಗಳಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರಕ್ಕೆ ಒತ್ತು ನೀಡಬೇಕು ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಚಳಿಗಾಲದ ಸಮಯದಲ್ಲಿ ಅಮೆರಿಕದಲ್ಲಿ ಇನ್ನಷ್ಟು ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಹೀಗಾಗಿ ಜನರು ಸಾಧ್ಯವಾದಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಇಲ್ಲದಿದ್ದರೆ ತೊಂದರೆ ಅನುಭವಿಸಬೇಕಾಯಿತು ಎಂದು ಅವರು ತಿಳಿಸಿದ್ದಾರೆ.
ಬೇಸಿಗೆಕಾಲ ಆರಂಭವಾಗುವ ತನಕ ಜನರು ಸಾಧ್ಯವಾದಷ್ಟು ಮನೆಯಲ್ಲಿ ಇರಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಆದಷ್ಟು ಶೀಘ್ರ ಲಸಿಕೆ ಬಂದರೆ ಸೋಂಕು ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಅಮೆರಿಕದಲ್ಲಿ ಕಳೆದ ಹತ್ತು ದಿನಗಳಲ್ಲಿ ೧೦ ಲಕ್ಷಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿರುವುದು ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಸೂಚನೆಯನ್ನು ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ತಿಳಿಸಿದ್ದಾರೆ.
ಜನರು ಸಾಧ್ಯವಾದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಆಗ ಮಾತ್ರ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗಲಿದೆ ಇಲ್ಲದಿದ್ದರೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ