ಅಮೇರಿಕಾದ ಕ್ಯಾಪಿಟಲ್ ಮೇಲೆ ದಾಳಿ ಹಲವರ ಬಂಧನ

ವಾಷಿಂಗ್ಟನ್ ಜ.೧೦- ಅಮೇರಿಕಾದ ಸಂಸತ್ ಭವನ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಅನೇಕ ಬೆಂಬಲಿಗರನ್ನು ಇಂದು ಕೂಡ ಬಂಧಿಸಲಾಗಿದೆ.
ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಅವರ ಆಯ್ಕೆಯನ್ನು ವಿರೋಧಿಸಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಈ ದಾಳಿ ನಡೆಸಿದ್ದರು.
ದಾಳಿಯಲ್ಲಿ ನಾಲ್ಕು ಮಂದಿ ಮೃತಪಟ್ಟು ಅನೇಕ ಮಂದಿ ಗಾಯಗೊಂಡಿದ್ದರು.ಈ ಘಟನೆಯ ಬಳಿಕ ಅಮೆರಿಕ ಪೊಲೀಸರು ಅನೇಕರನ್ನು ಬಂಧಿಸಿದ್ದರು. ಇನ್ನಷ್ಟು ಸಾಕ್ಷಾಧಾರಗಳು ಮತ್ತು ಖಚಿತ ಮಾಹಿತಿಯ ಆಧಾರದ ಮೇಲೆ ಮತ್ತಷ್ಟು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಅಮೆರಿಕದ ಅಧಿಕಾರ ಗದ್ದುಗೆ ಹಿಡಿಯುವ ಸಂಬಂಧ ಉಂಟಾದ ಹಿಂಸಾಚಾರ ಮತ್ತು ಗಲಭೆ ಪ್ರಕರಣ ಇಡಿ ವಿಶ್ವ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು .ಅಲ್ಲದೆ ಡೊನಾಲ್ಡ್ ಟ್ರಂಪ್ ಅವರ ನಡೆಯನ್ನು ತೀವ್ರವಾಗಿ ಖಂಡಿಸಲಾಗಿತ್ತು
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಅಮೆರಿಕದ ಪೊಲೀಸರು ಸಾಮೂಹಿಕ ದಾಳಿಯಲ್ಲಿ ಭಾಗಿಯಾದವರನ್ನು ಗುರುತಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.
ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಂದಿಯನ್ನು ಬಂಧಿಸಿ ಅವರಿಂದ ವಿಚಾರಣೆ ನಡೆಸಿ ಮಾಹಿತಿ ಆಧತಿದಿ ಹಲವರನ್ನು ಇನ್ನು ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ
ಜ ೨೦ ಅಧಿಕಾರ ಸ್ವೀಕಾರ;
ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡೆನ್ ಅವರು ಈ ತಿಂಗಳ ೨೦ ರಂದು ಅಮೆರಿಕದ ೪೬ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿರುವ ನಡುವೆಯೇ ಕ್ಯಾಪಿಟಲ್ ಕಟ್ಟಡದ ಮೇಲೆ ದಾಳಿ ಮಾಡಿದ ಅವರನ್ನು ಬಂಧಿಸಲಾಗುತ್ತದೆ