ಅಮ್ಮ ಪ್ರಶಸ್ತಿಗೆ ಭಾರತಿ, ಸಿರನೂರಕರ್, ಸನದಿ, ಸುರೇಶ್, ಕಿರಣ್, ದಯಾನಂದ್ ಕೃತಿಗಳ ಆಯ್ಕೆ

ಕಲಬುರಗಿ,ನ.12: ಜಿಲ್ಲೆಯ ಸೇಡಂ ತಾಲ್ಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಅಮ್ಮ ಪ್ರಶಸ್ತಿ'ಗೆ ಭಾರತಿ ಹೆಗಡೆ, ಸುರೇಶ್ ನಾಗಲಮಡಿಕೆ, ಕೆ.ಎ. ದಯಾನಂದ್, ಕಿರಣ್ ಭಟ್, ಡಾ. ಶ್ರೀನಿವಾಸ್ ಸಿರನೂರಕರ್, ನದೀಂ ಸನದಿ ಮತ್ತು ಸತ್ಯಮಂಗಲ ಮಹಾದೇವ್ ಅವರ ಕೃತಿಗಳು ಆಯ್ಕೆಯಾಗಿವೆ ಎಂದುಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ಅವರು ಘೋಷಿಸಿದ್ದಾರೆ.
ಭಾರತಿ ಹೆಗಡೆ ಅವರ ಸೀತಾಳೆದಂಡೆಯ ಕಥೆಗಳು' (ಕಥಾ ಸಂಕಲನ), ಸುರೇಶ್ ನಾಗಲಮಡಿಕೆ ಅವರಹಾಡು ಕಲಿಸಿದ ಹರ’ (ಸಂಸ್ಕøತಿ ಸಂಕಥನ), ಕೆ.ಎ. ದಯಾನಂದ್ ಅವರ ಹಾದಿಗಲ್ಲು (ಆತ್ಮಕಥನ), ಕಿರಣ್ ಭಟ್ ಅವರ ರಂಗ ಕೈರಳಿ (ಪ್ರವಾಸ ಕಥನ), ಕಲಬುರ್ಗಿಯ ಡಾ. ಶ್ರೀನಿವಾಸ್ ಸಿರನೂರಕರ್ ಅವರ ಪುರಂದರದಾಸರ ಬಂಡಾಯ ಪ್ರಜ್ಞೆ (ವೈಚಾರಿಕ ಸಂಕಲನ), ನದೀಂ ಸನದಿ ಅವರ ಹುಲಿಯ ನೆತ್ತಿಯ ನೆರಳು' ಮತ್ತು ಡಾ. ಸತ್ಯಮಂಗಲ ಮಹಾದೇವ್ ಅವರಪಂಚವರ್ಣದ ಹಂಸ’ (ಕವನ ಸಂಕಲನ) ಕೃತಿಗಳನ್ನು 20 ನೇ ವರ್ಷದ ಅಮ್ಮ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ. ಪ್ರಶಸ್ತಿಯು ತಲಾ 5000 ರೂ.ಗಳ ನಗದು ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ ಮತ್ತು ಸತ್ಕಾರ ಒಳಗೊಂಡಿರುತ್ತದೆ. ಕಾವ್ಯ ವಿಭಾಗದಲ್ಲಿ ಇಬ್ಬರು ಕವಿಗಳು ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಇದೇ ನವೆಂಬರ್ 26ರಂದು ಸಂಜೆ 5.30ಕ್ಕೆ ಸೇಡಮ್‍ನ ಶ್ರೀ ಪಂಚಲಿಂಗೇಶ್ವರ್ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿಅಮ್ಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ನೆನಪಿನಲ್ಲಿ ಸ್ಥಾಪಿಸಿದ ಅಮ್ಮ ಪ್ರಶಸ್ತಿ'ಗೆ ಈಗ 20 ನೇ ವರ್ಷದ ಸಂಭ್ರಮ. ಕನ್ನಡದ ಪ್ರತಿಭಾವಂತ ಬರಹಗಾರರುಅಮ್ಮ ಪ್ರಶಸ್ತಿ’ಗಾಗಿ ತಮ್ಮ ಕೃತಿಗಳನ್ನು ಕಳುಹಿಸುವ ಮೂಲಕ ಪ್ರಶಸ್ತಿಯನ್ನು ಗುರುತಿಸಿದ್ದಾರೆ ಹಾಗೂ ಗೌರವಿಸಿದ್ದಾರೆ. ಈ ಬಾರಿ 391 ಕೃತಿಗಳು ಬಂದಿದ್ದವು. ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ `ಅಮ್ಮ ಪ್ರಶಸ್ತಿ’ ರಾಜ್ಯದ ಗಣನೀಯ ಪ್ರಶಸ್ತಿಗಳಲ್ಲಿ ಒಂದಾಗಬೇಕು ಎಂಬ ಪ್ರತಿಷ್ಠಾನದ ಆಶಯಕ್ಕೆ ಅನುಗುಣವಾಗಿ ನಾಡಿನ ಖ್ಯಾತ ಲೇಖಕರು, ಕವಿಗಳು, ಪ್ರಕಾಶಕರು ಮತ್ತು ಲೇಖಕರ ಅಭಿಮಾನಿ ಓದುಗರು ಸ್ಪಂದಿಸಿದ್ದೇ ಇದೊಂದು ಗೌರವಾನ್ವಿತ ಪ್ರಶಸ್ತಿಯಾಗಿ ರೂಪುಗೊಂಡಿದೆ ಎಂಬುದಕ್ಕೆ ಸಾಕ್ಷಿ ಎಂದು ಅವರು ಬಣ್ಣಿಸಿದ್ದಾರೆ.