ಅಯೋಧ್ಯೆಗೆ ನೇರ ವಿಮಾನ ಸೌಲಭ್ಯ ಕಲ್ಪಿಸಲು ಹರ್ಷಾನಂದ ಮನವಿ

ಕಲಬುರಗಿ :ಡಿ.30:ವಿಮಾನ ನಿಲ್ದಾಣದಿಂದ ಅಯೋಧ್ಯೆಗೆ ನೇರ ವಿಮಾನ ಸೌಲಭ್ಯವನ್ನು ಕಲ್ಪಿಸಿಕೊಡಬೇಕು ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಎಕ್ಸ್‍ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಕಲಬುರಗಿ ಸಂಸದ ಉಮೇಶ ಜಾಧವ ಅವರಿಗೆ ಮನವಿ ಮಾಡಿಕೊಂಡಿರುವ ಅವರು, ಕಲಬುರಗಿ ವಿಮಾನ ನಿಲ್ದಾಣದಿಂದ ಅಯೋಧ್ಯೆಯ ಮಹಿರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ನೇರ ಸೌಲಭ್ಯ ಕಲ್ಪಿಸಿ ಈ ಭಾಗದ ಹಾಗೂ ನೆರೆಯ ಮಹಾರಾಷ್ಟ್ರದ ರಾಮ ಭಕ್ತರಿಗೆ ಅನೂಕೂಲ ಮಾಡಿಕೊಡಬೇಕು ಎಂದು ವಿನಂತಿಸಿಕೊಂಡಿದ್ದಾರೆ.