ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ

ಸಂಜೆವಾಣಿ ವಾರ್ತೆ

ಹಿರಿಯೂರು : ಡಿ.31-ನಗರದ ದಕ್ಷಿಣ ಕಾಶಿ ಶ್ರೀ ತೇರುಮಲೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಮಂಡಳಿ ವತಿಯಿಂದ ಅಯ್ಯಪ್ಪ ಸ್ವಾಮಿಯ ಮಂಡಲ ಪೂಜಾ ಕಾರ್ಯಕ್ರಮ ಭಕ್ತಿ ಭಾವದಿಂದ ನಡೆಯಿತು. ಇದರ ಅಂಗವಾಗಿ ಅಯ್ಯಪ್ಪ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು 18 ಪಡಿ ಪೂಜೆ ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಿತು. ದೇವಾಲಯದ ಗುರುಸ್ವಾಮಿಗಳಾದ ಪರಶುರಾಮ ಸ್ವಾಮೀಜಿ ರಾಘವೇಂದ್ರ ಮಣಿಕಂಠ ಶ್ರೀನಿವಾಸ್ ತಿಪ್ಪೇಸ್ವಾಮಿ ಮುನಿಸ್ವಾಮಿ ಜಗದೀಶ್ ಬಂಡಾರಿ ಹಾಗೂ ಅನೇಕ ಮಾಲಾಧಾರಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು