ಅರಂತೋಡಿನಲ್ಲಿ ಕೋವಿಡ್ ಕಾರ್ಯಪಡೆ ಸಭೆ

ಸುಳ್ಯ, ಮೇ ೨೭- ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಂತೋಡು- ತೊಡಿಕಾನ ಗ್ರಾಮಗಳ ಕೋವಿಡ್ ಕಾರ್ಯ ಪಡೆಗಳ ಜಂಟಿ ಸಭೆಯು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಇವರ ನೇತೃತ್ವದಲ್ಲಿ ಸೋಮವಾರ ನಡೆಯಿತು.
ಕೋವಿಡ್ ೧೯ ನಿಯಂತ್ರಣಕ್ಕಾಗಿ ಸರಕಾರ ಕೈಗೊಂಡಿರುವ ಕ್ರಮಗಳು, ಟಾಸ್ಕ್ ಫೋರ್ಸ್ ನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ಡಿ.ಡಿ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ತಾಲ್ಲೂಕು ಆರೋಗ್ಯಾಧಿಕಾರಿ ನಂದಕುಮಾರ್ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅರಂತೋಡು ಠಿhಛಿ ವೈದ್ಯಾಧಿಕಾರಿ ಡಾ. ರಿಜ್ವಾನ್, ನಿಕಟಪೂರ್ವ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹರೀಶ್ ಕಂಜಿಪಿಲಿ , ನಿಕಟ ಪೂರ್ವ ತಾಲ್ಲೂಕು ಪಂಚಾಯಿತಿ ಸದಸ್ಯ ರಾಧಾಕೃಷ್ಣ ಬೊಳ್ಳೂರು , ಕೋವಿಡ್ ಕಾರ್ಯಪಡೆಗಳ ಸದಸ್ಯರು ಗಳು ಉಪಸ್ಥಿತರಿದ್ದರು.