ಅರಣ್ಯ ಇಲಾಖೆ ನೂತನ ಕಟ್ಟಡ ಉದ್ಘಾಟನೆ

ಹರಪನಹಳ್ಳಿ ನ 21 : ಪಟ್ಟಣದ ಅರಣ್ಯ ಇಲಖೆ ಆವೃನದಲ್ಲಿ ನಿರ್ಮಾಣ ಮಾಡಲಾಗಿರುವ ತಾಲೂಕು ಪ್ರಾದೇಶಿಕ ಅರಣ್ಯ ಇಲಾಖೆಯ ನೂತನ ಕಟ್ಟಡವನ್ನು ಶುಕ್ರವಾರ ಶಾಸಕ ಜಿ.ಕರುಣಾಕರರೆಡ್ಡಿ ಉದ್ಘಾಟಿಸಿದರು.
ಕಟ್ಟಡವನ್ನು ವೀಕ್ಷಿಸಿದ ಶಾಸಕರು ಸುಂದರವಾಗಿ ನಿರ್ಮಾಣ ಮಾಡಲಾಗಿದೆ. ಜೊತೆಗೆ ಗೂಣಮಟ್ಟವೂ ಕಾಪಾಡಿಕೊಳ್ಳಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿ ಸಂಜಯ್ ಮೋಹನ್, ಬಳ್ಳಾರಿ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿ ಲಿಂಗರಾಜ್, ದಾವಣಗೆರೆ ಉಪ ಅರಣ್ಯ ಸಂರಕ್ಷಣಾದಿಕಾರಿ ಶ್ರೀನಿವಾಸಮೂರ್ತಿ, ದಾವಣಗೆರೆ ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ತಿಪ್ಪೇಸ್ವಾಮಿ, ತಾ.ಪಂ ಅಧ್ಯಕ್ಷೆ ಅನ್ನಪೂರ್ಣಮ್ಮ, ಉಪವಿಭಾಗಾದಿಕಾರಿ ವಿ.ಕೆ.ಪ್ರಸನ್ನಕುಮಾರ್, ತಾಲ್ಲೂಕು ವಲಯ ಅರಣ್ಯಾದಿಕಾರಿ ಡಿ.ಭರತ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.