ಕಲಬುರಗಿ:ಜು.31:ಪರಿಸರದ ಸಮತೋಲವಾಗಿರಲು ನಿರ್ದಿಷ್ಟ ಪ್ರಮಾಣದ ಅರಣ್ಯಗಳ ಅವಶ್ಯಕತೆಯಿದೆ. ಕಾಡುಗಳ್ಳರು, ಬೆಂಕಿಯ ಅನಾಹುತಗಳಿಂದ ಕಾಡುಗಳನ್ನು ರಕ್ಷಿಸಿ ಅರಣ್ಯ ಸಂಪತ್ತನ್ನು ಉಳಿಸುವಲ್ಲಿ ರೇಂಜರ್‍ಗಳ ಸೇವೆ ಅನನ್ಯವಾಗಿದೆ ಎಂದು ವಲಯ ಅರಣ್ಯಾಧಿಕಾರಿ ರಮೇಶ ಗಾಣಿಗೇರ್ ಅಭಿಮತ ವ್ಯಕ್ತಪಡಿಸಿದರು.
ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಜರುಗಿದ ‘ವಿಶ್ವ ರೇಂಜರ್ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸೇವಾ ಬಳಗದ ಅಧ್ಯಕ್ಷ, ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ‘ದಿ ಥಿüನ್ ಗ್ರೀನ್ ಲೈನ್ ಪೌಂಡೇಶನ್’ ಮತ್ತು ‘ಅಂತಾರಾಷ್ಟ್ರೀಯ ರೇಂಜರ್ ಫೆಡರೇಶನ್’ ಸಂಸ್ಥೆಯು 2007ರಿಂದ ಈ ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಿದೆ. ರೇಂಜರ್‍ಗಳು ವನ್ಯಜೀವಿಗಳ ಬಗ್ಗೆ ಮಾಹಿತಿ ನಿಡುವುದು, ಪ್ರವಾಸಿಗರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕರ್ತವ್ಯ ಸೇರಿದಂತೆ ಮುಂತಾದ ಸೇವೆಗಳನ್ನು ನೀಡುತ್ತಾರೆ. ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡುವವರನ್ನು ಸ್ಮರಿಸಲು ದಿನಾಚರಣೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ, ನಿವೃತ್ತ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಮುಖ್ಯ ಶಿಕ್ಷಕ ದೇವೇಂದ್ರಪ್ಪ ಗಣಮುಖಿ, ಜೆಸ್ಕಾಂ ಸಿಬ್ಬಂದಿ ಮಹೇಶ ವಂಟಿ, ಶಿಕ್ಷಕ ಶರಣಬಸಪ್ಪ ಮಲಶೆಟ್ಟಿ, ಉಪವಲಯ ಅರಣ್ಯ ಅಧಿಕಾರಿ ಮಲ್ಲಿಕಾರ್ಜುನ ಎಚ್.ಜಮಾದಾರ, ಅರಣ್ಯ ರಕ್ಷಕ ಕಾಂತಪ್ಪ ಪೂಜಾರಿ, ಪ್ರಾಣಿ ಪಾಲಕ ಸದಾನಂದ ಶಿರವಾಳ, ಅರಣ್ಯ ವೀಕ್ಷಕಿ ಶಿವಲೀಲಾ ತೆಗನೂರ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.