ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಶೀಲವಂತ

ಬೀದರ್: ಆ.6:ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡಿ.ದೇವರಾಜ ಅರಸು ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುವುದು. ಬೆಳಿಗ್ಗೆ 11ಕ್ಕೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಪಾಲ್ಗೊಳ್ಳಬೇಕು ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಅರಸು ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ ಹಾಗೂ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿತರಿಸಬೇಕು ಎಂದು ತಿಳಿಸಿದರು.

ಬೀದರ್ ಉಪ ವಿಭಾಗಾಧಿಕಾರಿ ಮಹಮ್ಮದ್ ನಯೀಮ್ ಮೊಮಿನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸದಾಶಿವ ಬಡಿಗೇರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಸುಧಾಕರ ಏಕಂಬೇಕರ್ ಮೊದಲಾದವರು ಇದ್ದರು.