
ಚಿಕ್ಕನಾಯಕನಹಳ್ಳಿ, ಆ. ೧೯- ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಸಿ.ಬಿ. ಸುರೇಶ್‌ಬಾಬು ರವರ ಅಧ್ಯಕ್ಷತೆಯಲ್ಲಿ ದೇವರಾಜ ಅರಸು ಜಯಂತಿ ಆಚರಣೆಯ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಧಿಗಳು ಭಾಗವಹಿಸಿದ್ದರು. ಆ. ೨೦ ರಂದು ಪಟ್ಟಣದ ತೀನಂಶ್ರೀ ಭವನದಲ್ಲಿ ದಿ.ದೇವರಾಜ ಅರಸು ರವರ ಜಯಂತಿ ಆಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ದೇವರಾಜ ಅರಸು ವಿದ್ಯಾರ್ಥಿನಿಲಯದಲ್ಲಿದ್ದು ವ್ಯಾಸಂಗ ಮಾಡಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ತಹಸೀಲ್ದಾರ್ ವಿ. ನಾಗಮಣಿ, ಇಓ ವಸಂತಕುಮಾರ್, ಮುಖಂಡರಾದ ಸಿಂಗದಹಳ್ಳಿ ರಾಜ್‌ಕುಮಾರ್, ಸಿ.ಡಿ. ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.