ಅರುಂಧತಿಗೆ ರಾಷ್ಟ್ರ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ


ಸಂಜೆವಾಣಿ ವಾರ್ತೆ
ಸಂಡೂರು : ಡಿ: 1:  ಪಟ್ಟಣದ 6ನೇ ವಾರ್ಡ ಶಾಲೆಯ ಮುಖ್ಯಗುರುಗಳಾದ ಅರುಂಧತಿ.ಕೆ.ಜಿ. ಅವರಿಗೆ ಬೆಳಕು ಸಾಹಿತ್ಯ , ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಜ್ಯ ಮಟ್ಟದ ಬೆಳಕು ಸಂಭ್ರಮದ ಅಡಿಯಲ್ಲಿ ರಾಷ್ಟ್ರ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇವರ ನಿಸ್ವಾರ್ಥ ಸೇವೆ, ಉತ್ತಮ ಗುಣಮಟ್ಟದ ಶಿಕ್ಷಣ, ಬಡ ಮಕ್ಕಳನ್ನು ರಾಜ್ಯ ಮಟ್ಟದ ಯೋಗ ಮತ್ತು ಇತರ ಚಟುವಟಿಕೆಯಲ್ಲಿ ಭಾಗವಹಿಸುವಂತೆ ಮಾಡಿದ ಶ್ರಮ, ಹಾಳು ಬಿದ್ದ ಶಾಲೆಯನ್ನು ಸುಂದರವನವನ್ನಾಗಿಸುವಲ್ಲಿ ನಿರಂತರ ಶ್ರಮ ವಹಿಸಿ ನೋಡುಗರನ್ನು ಸೆಳೆಯುವಂತೆ ಮಾಡಿದೆ, ಅಲ್ಲದೆ ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲ ಎನ್ನುವಂತೆ ತಾಲೂಕಿನಲ್ಲಿ ನಡೆಯುವ ಎಲ್ಲಾ ಸ್ಪರ್ಧೆಗಳಿಗೆ ವಿದ್ಯಾರ್ಥಿಗಳು ಭಾಗವಹಿಸುವಂತೆ ಮಾಡಿ ಪ್ರಶಸ್ತಿಗಳನ್ನು ಬಾಚಿಕೊಳ್ಳುವಂತೆ ಮಾಡಿದ್ದು, ಅಲ್ಲದೆ ನಿರಂತರ ಶಿಕ್ಷಣ ನೀಡಿಕೆಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತಯಾರು ಮಾಡಿದ ರೀತಿ, ಸಹ ಶಿಕ್ಷಕರನ್ನು ಬೆಂಬಲಿಸಿ ಅವರಿಂದ ಉತ್ತಮ ಕೆಲಸ ಪಡೆದು ಅವರನ್ನು ಸಹ ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದನ್ನು ಗುರುತಿಸಿದ ಸಂಸ್ಥೆ ಇವರಿಗೆ ರಾಷ್ಟ್ರಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಯನ್ನು ನೀಡುವ ಮೂಲಕ ತಾಲೂಕಿನ, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಇವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಶಾಲೆಯ ಶಿಕ್ಷಕವೃಂದ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.