ಅರುಣಾಚಲ ಭಾರತದ ಅವಿಭಾಜ್ಯ ಅಂಗ

ಚೀನಾಕ್ಕೆ ತಿರುಗೇಟು
ನವದೆಹಲಿ,ಏ.೪-ಅರುಣಾಚಲ ಪ್ರದೇಶದ ೧೧ ಸ್ಥಳಗಳ ಹೆಸರನ್ನು ಮರು ನಾಮಕರಣ ಮಾಡಿರುವ ಚೀನಾದ ಕ್ರಮಕ್ಕೆ ಭಾರತ ತಿರುಗೇಟು ನೀಡಿದೆ.
ಅರುಣಾಚಲ ಪ್ರದೇಶ ಭಾರತ ಅವಿಭಾಜ್ಯ ಅಂಗ. ಅರುಣಾಚಲ ಪ್ರದೇಶದ ಮೇಲಿನ ತನ್ನ ಹಕ್ಕನ್ನು ಪುನಃ ಒತ್ತಿಹೇಳುವ ಪ್ರಯತ್ನದ ಭಾಗವಾಗಿ ಚೀನಾ ನಿನ್ನೆ ೧೧ ಸ್ಥಳಗಳಿಗೆ ಹೊಸ ಹೆಸರುಗಳನ್ನು ಬಿಡುಗಡೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕೇಂದ್ರ ಸರ್ಕಾರ ತಿರುಗೇಟು ನೀಡಿದೆ.
ಚೀನಾ ಬಿಡುಗಡೆ ಮಾಡಿರುವ ಹೆಸರುಗಳ ಪಟ್ಟಿಯಲ್ಲಿ ಐದು ಪರ್ವತ ಶಿಖರಗಳು, ಎರಡು ಭೂ ಪ್ರದೇಶಗಳು, ಎರಡು ವಸತಿ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿದ್ದು ಅವುಗಳೆಲ್ಲವೂ ಭಾರತದ ಭೂಪ್ರದೇಶ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಒತ್ತಿ ಹೇಳಿದ್ದಾರೆ.
ಚೀನಾ ಬಿಡುಗಡೆ ಮಾಡಿರುವ ಹೆಸರುಗಳ ಪಟ್ಟಿಯಲ್ಲಿ ಐದು ಪರ್ವತ ಶಿಖರಗಳು, ಎರಡು ಭೂ ಪ್ರದೇಶಗಳು, ಎರಡು ವಸತಿ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿವೆ.ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ,”ನಾವು ಇಂತಹ ವರದಿಗಳನ್ನು ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡಿರುವುದು ಇದೇ ಮೊದಲಲ್ಲ. ನಾವು ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ ಎಂದಿದ್ದಾರೆ .
“ಅರುಣಾಚಲ ಪ್ರದೇಶ ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವ ಪ್ರಯತ್ನಗಳು ಈ ವಾಸ್ತವತೆಯನ್ನು ಬದಲಾಯಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಚೀನಾದಲ್ಲಿ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಮುಖವಾಣಿ ಪೀಪಲ್ಸ್ ಡೈಲಿ ಗುಂಪಿನ ಭಾಗವಾಗಿರುವ ದಿ ಗ್ಲೋಬಲ್ ಟೈಮ್ಸ್ ಪ್ರಕಾರ, ಚೀನಾದ ಅಧಿಕಾರಿಗಳು ಈ ಕ್ರಮವನ್ನು ’ಪ್ರಮಾಣೀಕೃತ ಭೌಗೋಳಿಕ ಹೆಸರುಗಳು’ ಎಂದು ಕರೆದಿದ್ದಾರೆ.
ದಲೈ ಲಾಮಾ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ ನಂತರ ೨೦೧೭ ದಿನಗಳಲ್ಲಿ ಮೊದಲ ಹೆಸರುಗಳನ್ನು ಚೀನಾ ಘೋಷಿಸಿತು. ಟಿಬೆಟಿಯನ್ ಆಧ್ಯಾತ್ಮಿಕ ನಾಯಕನ ಭೇಟಿಯನ್ನು ಚೀನಾ ಕಟುವಾಗಿ ಟೀಕಿಸಿದೆ.೧೯೫೦ ರಲ್ಲಿ ಚೀನಾ ಹಿಮಾಲಯ ಪ್ರದೇಶವನ್ನು ಮಿಲಿಟರಿ ನಿಯಂತ್ರಣಕ್ಕೆ ತೆಗೆದುಕೊಂಡ ನಂತರ ದಲೈ ಲಾಮಾ ಟಿಬೆಟ್‌ನಿಂದ ಅರುಣಾಚಲ ಪ್ರದೇಶದ ತವಾಂಗ್ ಮೂಲಕ ಪಲಾಯನ ಮಾಡಿದರು ಮತ್ತು ೧೯೫೯ ರಲ್ಲಿ ಭಾರತದಲ್ಲಿ ಆಶ್ರಯ ಪಡೆದರು.
ಪೂರ್ವ ಲಡಾಖ್‌ನಲ್ಲಿ ತಿಂಗಳುಗಳ ಕಾಲ ಗಡಿ ಬಿಕ್ಕಟ್ಟಿನ ಮಧ್ಯೆ ಬಂದ ಮುಖಾಮುಖಿಯಲ್ಲಿ, ಕಳೆದ ಡಿಸೆಂಬರ್‍ನಲ್ಲಿ ರಾಜ್ಯದ ತವಾಂಗ್ ಸೆಕ್ಟರ್‍ನಲ್ಲಿ ಭಾರತ ಮತ್ತು ಚೀನಾದ ಪಡೆಗಳು ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಘರ್ಷಣೆ ನಡೆಸಿದ್ದವು.