ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಿದ ಸಚಿವರು

ಹಿರಿಯೂರು: ಜೂ.12-ಕರ್ನಾಟಕ ಸರ್ಕಾರದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸಚಿವರಾದ ಡಿ. ಸುಧಾಕರ್ ರವರು ಹಿರಿಯೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ  ಇಲ್ಲಿನ ನಗರಸಭೆ ಆವರಣದಲ್ಲಿ ಅನೇಕ ಜನರು ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿ ಕೊಡುವಂತೆ ಅರ್ಜಿಗಳನ್ನು ತಂದಿದ್ದರು. ಸಚಿವರು ಸ್ಥಳದಲ್ಲಿಯೇ ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ  ಸದರಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದರು.