ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ದಾವಣಗೆರೆ ಜ.12: ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ   ಜಿಲ್ಲಾಡಳಿತದಿಂದ   ಇದೇ ಜ. 26 ರಂದು  74 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಆಚರಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನದ ಕಾಪಾಶಿ ಅವರು ಸೂಚನೆ ನೀಡಿದರು.ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗದಿ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು,  ರಾಷ್ಟ್ರೀಯ ಹಬ್ಬವಾಗಿರುವ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದೆ. ಅವರ ಶ್ರಮ, ತ್ಯಾಗ, ಬಲಿದಾನಗಳಿಗೆ ನಾವು ಆದರಪೂರ್ವಕವಾಗಿ ಗೌರವ ಸಮರ್ಪಿಸೋಣ ಎಂದರು.ಜನವರಿ 26 ರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ನಿಯಮಾನುಸಾರ ಧ್ವಜಾರೋಹಣ ನೆರೆವೇರಿಸಿ ಬೆಳಿಗ್ಗೆ 8.30 ರೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಸಮಾರಂಭದಲ್ಲಿ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಪಾಲ್ಗೊಳಬೇಕು.  ಅಂದು ಸರ್ಕಾರದ ಎಲ್ಲ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಸಮಾರಂಭದಲ್ಲಿ ಹಾಜರಿರಬೇಕು.  ಕೋವಿಡ್ ನಿಯಂತ್ರಣ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭ ಜರುಗಿಸಲು ವ್ಯವಸ್ಥೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಪಥ ಸಂಚಲನದಲ್ಲಿ ಶಾಲಾ ಮಕ್ಕಳು, ಪೊಲೀಸ್, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಜೊತೆಗೆ ಗೃಹರಕ್ಷಕ ದಳದ ತಂಡಗಳು ಪಾಲ್ಗೊಳ್ಳಲಿವೆ.  ಕಾರ್ಯಕ್ರಮ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ ಮಕ್ಕಳಿಗೆ ಸರ್ಕಾರದಿಂದ ನೀಡಲಾಗುವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದರು.
ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಾಂಸ್ಕøತಿಕ ಕಾರ್ಯಕ್ರಮ ನೀಡುವ ಮತ್ತು ಪೆರೇಡ್‍ನಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು ಎಂದು ಸೂಚಿಸಿದರು.