ಅರ್ಹರೆಲ್ಲರೂ ಕೊರೊನಾ ವ್ಯಾಕ್ಸಿನ್ ಪಡೆದುಕೊಳ್ಳಿ ಖಾಶೆಂಪೂರ

ಬೀದರ:ಎ.28: ರಾಷ್ಟ್ರದೆಲ್ಲಡೆ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಅದರಂತೆಯೇ ಕೊರೊನಾ ವೈರಸ್ ತಡೆಗಾಗಿ ಕೊರೊನಾ ವ್ಯಾಕ್ಸಿನೇಷನ್ ಪ್ರಕ್ರಿಯೆ ದೇಶದೆಲ್ಲೆಡೆ ನಡೆಯುತ್ತಿದ್ದು, ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಬೀದರ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ (ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಬೀದರ್) ಕೊರೊನಾ ವ್ಯಾಕ್ಸಿನ್ ಎರಡನೇ ಡೋಸ್ ಪಡೆದುಕೊಂಡ ಬಳಿಕ ಮಾತನಾಡಿದ ಅವರು, ನಾನು ಈ ಹಿಂದೆ ಮೊದಲನೆಯ ಹಂತದ ಕೊರೊನಾ ವ್ಯಾಕ್ಸಿನ್ ಅನ್ನು ಇದೇ ಆಸ್ಪತ್ರೆಯಲ್ಲೆ ಪಡೆದುಕೊಂಡಿದ್ದೆ. ವ್ಯಾಕ್ಸಿನ್ ಪಡೆದುಕೊಂಡಾಗ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿರಲಿಲ್ಲ.ಈಗಲೂ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದರು.
ಬೀದರ್ ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯ ಜನತೆ ಅನವಶ್ಯಕ ಓಡಾಟ ಮಾಡಬೇಡಿ. ಅತ್ಯವಶ್ಯಕ ಸಂದರ್ಭವಿದ್ದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಓಡಾಡಿ. ಸಾಮಾಜಿಕ ಅಂತರ,

ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಕೊರೊನಾದಿಂದ ದೂರವಿರಲು ಬೇಕಾಗುವ ಎಲ್ಲಾ ನಿಯಮಗಳನ್ನು ಪಾಲಿಸಿ. ವ್ಯಾಕ್ಸಿನ್ ಪಡೆದುಕೊಳ್ಳಲು ಅರ್ಹರಿರುವ ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಡಾ.ಸೋಹಿಲ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು, ಮುಖಂಡರು ಇದ್ದರು.