ಅರ್ಹ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ

ಧಾರವಾಡ, ಮಾ.19: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ,
ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಹಯೋಗದಲ್ಲಿ 2022-23ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ದ್ವಿಚಕ್ರ ವಾಹನ ವಿತರಣೆ ಯೋಜನೆಯಡಿ ಫಲಾನುಭವಿಗಳಿಗೆ ಶಾಸಕ ಅಮೃತ ದೇಸಾಯಿ ಅವರು ಇಂದು ಮುಂಜಾನೆ ಕಲಾಭವನ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.

ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ: ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಮೃತ ದೇಸಾಯಿ ಅವರು ಶಹರ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಓದಿ 2021-22 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಉಚಿತವಾಗಿ ಲ್ಯಾಪ್‍ಟಾಪ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲೆಗಳ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಕೆ.ಎಫ್. ಜಾವೂರ, ವಿದ್ಯಾರ್ಥಿಗಳ ಪಾಲಕರು ಹಾಜರಿದ್ದರು. ಶಾಸಕರು ವಿದ್ಯಾರ್ಥಿಗಳಿಗೆ ಸದರಿ ಯೋಜನೆ ಸದುಪಯೋಗ ಪಡಿಸಿಕೊಂಡು ಉನ್ನತ ಅಧ್ಯಯನ ಕೈಗೊಂಡು ಸಾಧನೆ ಮಾಡುವಂತೆ ಶುಭ ಹಾರೈಸಿ ಅಭಿನಂದಿಸಿದರು.