ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಿಸಿ-ಪರುಶುರಾಮಗೌಡ

ರಾಯಚೂರು, ಜುಲೈ, ೨೬, ಪ್ರಧಾನಿ ಮಂತ್ರಿ ಆವಾಸ್ ಯೋಜನೆಯ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ
ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕೆಂದು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಪ್ರಧಾನ ವ್ಯವಸ್ಥಾಪಕ ಪರುಶುರಾಮಗೌಡ ಅವರು ಹೇಳಿದರು.
ಅವರಿಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆವಾಸ್ ಸಾಫ್ಟ್ ತರಬೇತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಅವರು ನಿಗಮದಿಂದ ಜಿಲ್ಲೆಗೆ ೧ ಲಕ್ಷ ೬೦ ಸಾವಿರ ಮನೆಗಳು ಬಿಡುಗಡೆಯಾಗಿದ್ದು ಅದರಲ್ಲಿ ೯೦ ಸಾವಿರ ಮನೆಗಳು ಮಾತ್ರ ಮಂಜೂರು ಆಗಿದೆ ಎಂದರು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಅಧಿಕಾರಿಗಳು ನಿಗಮದ ಮಾರ್ಗಸೂಚಿಗಳ ಅನುಸರಿಸಬೇಕು ಎಂದು ಸಲಹೆ ನೀಡಿದರು.
ಆಪರೇಟರ್ ಗಳು ಡೇಟಾ ಎಂಟ್ರಿ ಮಾಡುವಲ್ಲಿ
ಅರ್ಹ ಫಲಾನುಭವಿಗಳು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರವನ್ನು ನೋಂದಣಿ ಮಾಡಬೇಕು ಎಂದರು.
ಪ್ರಧಾನಿ ಮಂತ್ರಿ ಆವಾಸ್ ಯೋಜನೆ ಸೌಲಭ್ಯ ಪಡೆಯುವ ಫಲಾನುಭವಿಗಳು ದ್ವಿ ಚಕ್ರ, ಟ್ರ್ಯಾಕ್ಟರ್, ವಾಹನಗಳನ್ನು ಹೊಂದಿರಬಾರದು ಹಾಗೂ ಅವರ ಮನೆಯಲ್ಲಿ ಸರ್ಕಾರಿ ನೌಕರರು ಇದ್ದಲ್ಲಿ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ ಎಂದರು.
ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ಗ್ರಾ. ಪಂ ಅಧ್ಯಕ್ಷರ ಗಮನಕ್ಕೆ ತಂದು ನೇಮಕ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನವೀನ್ ಕುಮಾರ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಿಡಿಒ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.