ಅರ್ಹ ಬಡವರಿಗೆ ಹೊಲಿಗೆ ಯಂತ್ರಗಳ ವಿತರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.18; ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಎನ್ನುವುದಕ್ಕೆ ಇತ್ತೀಚೆಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಬಡವರ ಕಲ್ಯಾಣಕ್ಕೆ ನೀಡಿರುವ ಕೊಡುಗೆಗಳೇ ಉದಾಹರಣೆ ಎಂದು ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಮಹಾನಗರ ಪಾಲಿಕೆಯ ವಿವಿಧ ಯೋಜನೆಯಡಿ ಅರ್ಹ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷ ಸ್ವಾತಂತ್ರö್ಯ ಬಂದ ದಿನದಿಂದಲೂ ಬಡವರ ಕಲ್ಯಾಣಕ್ಕೆ ಅನೇಕ ಕರ‍್ಯಕ್ರಮಗಳನ್ನು ನೀಡುತ್ತಾ ಬಂದಿದ್ದು, ಇಂದಿಗೂ ಸಹ ಬಡವರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದರು.ದಾವಣಗೆರೆ ಜಿಲ್ಲಾ ಸಚಿವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಈ ಯೋಜನೆ ಅತ್ಯಂತ ಅನುಕೂಲವಾಗಿದ್ದು, ಯಾರೂ ಸಹ ಈಗ ನೀಡಿರುವ ಹೊಲಿಗೆ ಯಂತ್ರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಮಹಾಪೌರರಾದ ವಿನಾಯಕ ಪೈಲ್ವಾನ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಎ.ನಾಗರಾಜ್. ರಹೀಂ ಸಾಬ್, ಜಿ.ಎಸ್.ಮಂಜುನಾಥ್, ಜಾಕೀರ್ ಅಲಿ, ಉದಯಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‍್ಯದರ್ಶಿ ಎಸ್.ಮಲ್ಲಿಕಾರ್ಜುನ್, ವಕೀಲರ ಅಧ್ಯಕ್ಷ ಪ್ರಕಾಶ್ ಪಾಟೀಲ್, ಹೆಚ್.ಜಯಣ್ಣ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ‍್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.