ಅಲಹಳ್ಳಿಯಲ್ಲಿ ಮಕ್ಕಳ ದಿನಾಚರಣೆ

ಕಲಬುರಗಿ,ನ.19-ಮಾರ್ಗದರ್ಶಿ ಮತ್ತು ಕ್ರೈ ಸಂಸ್ಥೆ ವತಿಯಿಂದ ಅಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಂಜನೆಯ ಗುತ್ತೇದಾರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವಿದ್ರಪ್ಪ ಅವರು ಆಗಮಿಸಿದ್ದರು. ಮಾರ್ಗದರ್ಶಿ ಸಂಸ್ಥೆಯ ನಿರ್ದೆಶಕÀ ಆನಂದರಾಜ್ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಕ್ಕಳನ್ನು ಉದ್ದೇಶಿಸಿ ಆನಂದರಾಜ್ ಅವರು ಮಾತನಾಡಿ, ದೇಶದ ಅಬೀವೃದ್ಧಿ ಇಂದಿನ ಮಕ್ಕಳ ಶಿಕ್ಷಣ ಪಡೆಯುವುದರ ಮೇಲೆ ನಿಂತಿದೆ ಎಂದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೇವೇಂದ್ರಪ್ಪ ಅವರು ಮಾತನಾಡಿ, ಮಕ್ಕಳು ದೇಶದ ಸಂಪತ್ತು ಎಂದು ಸ್ಥಳೀಯ ಸರ್ಕಾರದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು ಗ್ರಾಮ ಪಂಚಾಯತಿ ಅಧ್ಯಕ್ಷ ಆಂಜನೇಯ, ಗ್ರಾಮ ಪಂಚಾಯತಿಯ ಸದಸ್ಯರಾದ ಇಂದಿರಾ, ಸಮುದಾಯ ಸಂಘಟಕರು ಉಪಸ್ಥಿತರಿದ್ದರು. ಮಾರ್ಗದರ್ಶಿ ಸಂಸ್ಥೆ ವತಿಯಿಂದ ನಡೆಯುತ್ತಿರುವ ಟ್ಯೂಷನ್ ಸೆಂಟರ್‍ನಲ್ಲಿ ಭಾಗವಹಿಸುವ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಆಟೋಗಳನ್ನು ಆಡಿಸಿ ವಿಜೇತ ಮಕ್ಕಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು.