
ದಾವಣಗೆರೆ,ಏ.16; ದಾವಣಗೆರೆ ಜಿಲ್ಲೆಯ ಅಸ್ತಾಪನಹಳ್ಳಿ ಮತ್ತು ಗೋಪನಾಳು ಗ್ರಾಮದಲ್ಲಿ ಅಲೆಮಾರಿ ಜನಾಂಗ ಹಕ್ಕಿಪಿಕ್ಕಿ ಜನರು ವಾಸ ಮಾಡುತ್ತಿದ್ದು ಇವರೂ ಸಹ ಮತದಾನ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.ಜಿಲ್ಲಾಡಳಿ ಮತ್ತು ಸ್ವೀಪ್ ಸಮಿತಿಯಿಂದ ಅಸ್ತಾಪನಹಳ್ಳಿ ಮತ್ತು ಗೋಪನಾಳು ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಎರಡು ಗ್ರಾಮಗಳು ಬುಡಕಟ್ಟು ಜನಾಂಗಕ್ಕೆ ಸೇರಿದ ಹಕ್ಕಿ ಪಿಕ್ಕಿ ಜನಾಂಗದವರು ಹೆಚ್ಚು ವಾಸಿಸುತ್ತಿದ್ದಾರೆ. ಇವರ ಮುಖ್ಯ ಕಸುಬು ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಊರೂರು ಸುತ್ತುತ್ತಾರೆ. ಈ ನಿಟ್ಟಿನಲ್ಲಿ ಜನಾಂಗಕ್ಕೆ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮತದಾನ ದಿನದಂದು ಎಲ್ಲರೂ ಮತದಾನ ಮಾಡುವಂತೆ ಪ್ರೇರೆಪಿಸಲಾಯಿತು.ಮತದಾನ ನಮ್ಮ ಹಕ್ಕು, ತಪ್ಪದೇ ಮತ ಚಲಾಯಿಸಿ. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಲು ತಿಳಿಸಿ ಗ್ರಾಮದ ವಾಸಿಗಳು ಬೇರೆ ಕಡೆ ಇದ್ದಲ್ಲಿ ಮತದಾನದ ದಿನ ಮೇ 10 ರಂದು ತಪ್ಪದೇ ಗ್ರಾಮಕ್ಕೆ ಬಂದು ಮತದಾನ ಮಾಡಲು ತಿಳಿಸುವಂತೆ ಗ್ರಾಮಸ್ಥರಿಗೆ ವಿನಂತಿಸಿದರು.