ಅಲೆಮಾರಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ

ಕಲಬುರಗಿ:ಜ.19:2023-24 ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ ಅಲೆಮಾರಿ/ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಕ್ಕೆ ಸೇರಿದ ಮಕ್ಕಳಿಗೆ ಶೇ. 10ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾರ್ಚನಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ಅಲೆಮಾರಿ ಸಮುದಾಯದ ಎಲ್ಲಾ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅಲೆಮಾರಿ ಹೆಳವ ಸಮುದಾಯದ ಮುಖಂಡ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.