ಅಲೆಮಾರಿ ಸಮಾಜಕ್ಕೆ ಪ್ರಾತಿನಿಧ್ಯ ನೀಡಿ

ಕಲಬುರಗಿ:ಜೂ.7: ರಾಜ್ಯದಲ್ಲಿ ಅಲೆಮಾರಿ ಸಮುದಾಯದವರು ಎಲ್ಲಾ ಕ್ಷೇತ್ರಗಳಲ್ಲಿ ಅತಿ ಹಿಂದುಳಿದಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗಾಗಿ ಸರಕಾರದಿಂದ ವಿಶೇಷ ಅನುದಾನ ಮೀಸಲಿಡಬೇಕು.

ಕರ್ನಾಟಕ ರಾಜ್ಯ ಅಲೆಮಾರಿ ಹಾಗೂ ಅರೆ-ಅಲೆಮಾರಿ ಅಭಿವೃದ್ಧಿ ನಿಗಮದ ಹೊಸ ಅಧ್ಯಕ್ಷರನ್ನು ನಾಮನಿರ್ದೇಶನ ಮಾಡುವಾಗ ಆದ್ಯತೆಯ ಮೇರೆಗೆ ಅಲೆಮಾರಿ ಸಮುದಾಯದವರನ್ನು ನಿಗಮದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ-ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾಒಕ್ಕೂಟ ಕಲಬುರಗಿ ಜಿಲ್ಲೆಯ ಆಂತರಿಕ ಲೆಕ್ಕ ಪರಿಶೋಧಕ ಬಸವರಾಜ ಹೆಳವರ ಯಾಳಗಿ ಒತ್ತಾಯಿಸಿದ್ದಾರೆ.