ಅಲೆಮಾರಿ ಸಮುದಾಯದವರಿಗೆ ಅವಕಾಶ ನೀಡಿ

ಕಲಬುರಗಿ:ಜು.23: ಕರ್ನಾಟಕ ಅಲೆಮಾರಿ ಹಾಗೂ ಅರೆ-ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ನಾಮನಿರ್ದೇಶನ ಇತ್ತಿಚೆಗೆ ರದ್ದುಪಡಿಸಲಾಗಿದೆ. ಹೊಸದಾಗಿ ನಾಮನಿರ್ದೇಶನ ಮಾಡುವಾಗ ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯಕ್ಕೆ ಆದ್ಯತೆ ನೀಡಿ ಅದೇ ಸಮುದಾಯದ ಸಮಾಜ ಸೇವಕ ಮುಖಂಡರನ್ನು ನಿಗಮದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಬೇಕೆಂದು ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ನಿರ್ದೇಶಕ ಬಸವರಾಜ ಹೆಳವರ ಯಾಳಗಿ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅಲೆಮಾರಿ ಸಮುದಾಯದವರು ಎಲ್ಲಾ ಕ್ಷೇತ್ರಗಳಲ್ಲಿ ಬಹಳ ಹಿಂದುಳಿದಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಯಾಗಬೇಕೆಂದರೆ ಅದೇ ಸಮುದಾಯದವರನ್ನು ನಿಗಮದ ಅಧ್ಯಕ್ಷರನ್ನಾಗಿ ಮಾಡಬೇಕು ಹಾಗೂ ಸರಕಾರದಿಂದ ವಿಶೇಷ ಅನುದಾನ ಮೀಸಲಿಡಬೇಕು ಎಂದರು.