ಅಲ್ಪಸಂಖ್ಯಾತರ ಕಲ್ಯಾಣ ದಿನಾಚರಣೆ

ಧಾರವಾಡ,ನ20-ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಂದು ಅಲ್ಪಸಂಖ್ಯಾತರ ಕಲ್ಯಾಣ ದಿನ ಆಚರಿಸಲಾಯಿತು.
ಕೋಮು ಸೌಹಾರ್ದತೆ ,ಭಾಷಾ ಸೌಹಾರ್ದತೆ,ಶಾಂತಿ ಸಂದೇಶಗಳನ್ನು ಹೊಂದಿದ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಚಾಲನೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್.ಚಿನ್ನಣ್ಣವರ ಪ್ರತಿಜ್ಞೆ ಬೋಧಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಷೀದ್ ಮಿರ್ಜಣ್ಣವರ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಮತ್ತಿತರರು ಉಪಸ್ಥಿತರಿದ್ದರು.