ಅಲ್ಪಸಂಖ್ಯಾತರ ಶೈಕ್ಷಣಿಕ, ಸರ್ವತೋಮುಖ ಅಭಿವೃದ್ಧಿಗೆ ಸಹಕಾರ

ಕೋಲಾರ, ಆ. ೧೩- ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಸಮುದಾಯದವರ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಸಹಕಾರ ನೀಡುತ್ತೇನೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಪ್ರಧಾನ ಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ. ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಸಮುದಾಯದವರ ಶೈಕ್ಷಣಿಕ ಸರ್ವತೋಮುಖ ಅಭಿವೃದ್ಧಿ ಕಾರ್ಯಕ್ರಮಗಳ ಅನುಷನಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ೧೯೯೯-೨೦೦೦ನೇ ಸಾಲಿನಿಂದ ಪ್ರತ್ಯೇಕವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದರು.
ರಾಜ್ಯಮಟ್ಟದಲ್ಲಿ ನಿರ್ದೇಶನಾಲಯ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಚೇರಿ ಹಾಗೂ ತಾಲ್ಲೂಕುಗಳಲ್ಲಿ ಪ್ರತ್ಯೇಕವಾಗಿ ತಾಲ್ಲೂಕು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿರುವುದರ ಮೂಲಕ ಅಲ್ಪಸಂಖ್ಯಾತರ ಸಮುದಾಯದವರಿಗೆ ಭಾರತ ಸಂವಿಧಾನದ ಅನುಚ್ಛೇದ ೧೫(೪) ರಡಿಯಲ್ಲಿ ಶೈಕ್ಷಣಿಕ ಹಾಗೂ ೧೬(೪) ರಡಿಯಲ್ಲಿ ಔದ್ಯೋಗಿಕ ಮೀಸಲಾತಿ ಸೌಲಭ್ಯಗಳ ಕಾರ್ಯಕ್ರಮಗಳನ್ನು ಅನುಷನಗೊಳಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರು ಇರುವ ಹೆಚ್ಚಿನ ಜನಸಂಖ್ಯೆ ಪ್ರದೇಶದಲ್ಲಿ ತಮ್ಮ ಇಲಾಖೆಗಳಲ್ಲಿರುವ ಸೌಲಭ್ಯಗಳನ್ನು ಮಸೀದಿ ಹಾಗೂ ಜನಸಂಖ್ಯೆ ಇರುವ ಕಡೆ ಹೆಚ್ಚು ಹೆಚ್ಚು ಪ್ರಚಾರ ಹಾಗೂ ಅರಿವು ಮೂಡಿಸಬೇಕು ಎಂದು ಎಲ್ಲಾ ಇಲಾಖೆಗಳಿಗೂ ಸೂಚನೆ ನೀಡಿದರು.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಾಜಲದಿನ್ನೆ, ಕೋಲಾರ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಾಳಸಂದ್ರ, ಮುಳಬಾಗಿಲು ಇಲ್ಲಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ವಸತಿ ಕಾಲೇಜು ವಿದ್ಯಾರ್ಥಿ ನಿಲಯ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೋಲಾರ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಳಬಾಗಿಲು ಟೌನ್, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಕೋಲಾರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ ಕೋಲಾರ ಟೌನ್, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕೋಲಾರ ಟೌನ್, ಕಾಮಗಾರಿಗಳು ಅತಿ ಶೀಘ್ರದಲ್ಲಿ ಮುಕ್ತಾಯಗೊಳ್ಳುತ್ತದೆ.
ಉರ್ದು ಕಲಿಸಲು ಹೆಚ್ಚಿನ ಸಂಪನ್ಮೂಲಗಳು ಕನಿಷ ನಾಲ್ಕನೇ ಒಂದು ಭಾಗದಷ್ಟು ಆ ಭಾಷ ಗುಂಪಿಗೆ ಸೇರಿರುವ ಜನಸಂಖ್ಯೆಗೆ ಸೇವೆ ಸಲ್ಲಿಸುವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಉರ್ದು ಭಾಷ ಶಿಕ್ಷಕರ ನೇಮಕಾತಿ ಮತ್ತು ಪೋಸ್ಟಿಂಗ್‌ಗೆ ಕೇಂದ್ರದ ನೆರವು ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಗಣನೀಯವಾಗಿ ಬಲಪಡಿಸಲಾಗುತ್ತದೆ ಮತ್ತು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲಾಗುತ್ತದೆ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಗಳು, ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಸಂಬಂಧಪಟ್ಟ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.