ಅಲ್ಪಸಂಖ್ಯಾತರ ಹಿತರಕ್ಷಣೆಯ ಬಗ್ಗೆ ಯೋಚಿಸಿ ಮೈತ್ರಿ ಮಾಡಿಕೊಳ್ಳಿ : ಶಹಾಜಹಾನ ಡೊಂಗರಗಾಂವ

ಅಥಣಿ : ಜು.19:ಜೆಡಿಎಸ್ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇತರೆ ಪಕ್ಷದವರೊಂದಿಗೆ ಮೈತ್ರಿ ಮಾಡಿಕೊಳ್ಳುವಾಗ ಪಕ್ಷದ ಆಗುಹೋಗುಗಳ ಬಗ್ಗೆ ಹಾಗೂ ಮೈತ್ರಿಯಿಂದ ಆಗುವ ಲಾಭ ಮತ್ತು ಹಾನಿಯ ಬಗ್ಗೆ ಯೋಚನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಹಿತರಕ್ಷಣೆಯ ಬಗ್ಗೆ ದೂರದೃಷ್ಟಿಯನ್ನು ಇಟ್ಟುಕೊಂಡು ಪಕ್ಷದ ವರಿಷ್ಠರು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಅಥಣಿ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಶಹಾಜಹಾನ ಡೊಂಗರಗಾಂವ ಹೇಳಿದರು,
ಅವರು ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರ ನೇತೃತ್ವದಲ್ಲಿ ಜರುಗಿದ ಜೆಡಿಎಸ್ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು, ಮೈತ್ರಿ ವಿಷಯವಾಗಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರ ಉಪಸ್ಥಿತಿಯಲ್ಲಿ ಮೈತ್ರಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದರು,
ಈ ಸಭೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು,