ಅಲ್ಲು ಅರ್ಜುನ್ ಹುಟ್ಟುಹಬ್ಬ ಪುಷ್ಪ ಟೀಸರ್ ಬಿಡುಗಡೆ

ಹೈದರಾಬಾದ್, ಏ. ೮- ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಅಂಗವಾಗಿ ‘ಪುಷ್ಪ‘ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಶುಭ ಕೋರಿದ್ದಾರೆ.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಹುಟ್ಟುಹಬ್ಬದ ದಿನದಂದೇ ಮುಂಬರುವ ಚಿತ್ರ ಪುಷ್ಪ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಶುಭ ಕೋರಿದ್ದಾರೆ.
ಸುಕುಮಾರ್ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿದಂತೆ, ಪಂಚಭಾಷೆಗಳಲ್ಲಿ ಆಗಸ್ಟ್ ೧೩ ರಂದು ಚಿತ್ರ ತೆರೆಗೆ ಬರಲಿದೆ.
ಈ ಚಿತ್ರದಲ್ಲಿ ದಕ್ಷಿಣ ಭಾರತದ ನಟರಾದ ಪವದ್ ಫಸಲ್, ಧನಂಜಯ ಅಭಿನಯಿಸಿದ್ದಾರೆ.
ಅಲ್ಲು ಅರ್ಜುನ್ ಮತ್ತು ಸುಕುಮಾರ್ ಅವರ ಕಾಂಬಿನೇಷನ್ ನಲ್ಲಿ ಆರ್ಯ ಮತ್ತು ಆರ್ಯ – ೨ ತೆರೆಗೆ ಬಂದು ಚಿತ್ರ ಯಶಸ್ಸು ಗಳಿಸಿತ್ತು. ಇದೀಗ ಪುಷ್ಪ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.